×
Ad

ವೀಣಾ ಕಾಶಪ್ಪನವರ್ ಬೆಂಬಲಿಗರಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ

Update: 2024-03-20 18:20 IST

ಬಾಗಲಕೋಟೆ : ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸಂಯುಕ್ತ ಶಿವಾನಂದ ಪಾಟೀಲ್ ಹೆಸರು ಕೇಳಿ ಬಂದಿರುವ ಹಿನ್ನಲೆ, ಕಾಶಪ್ಪನವರ ಬೆಂಬಲಿಗರು ಕಾಂಗ್ರೆಸ್ ಪಕ್ಷದ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಕೋರ್ಟ್ ವೃತ್ತದಿಂದ ಪ್ರತಿಭಟನೆ ಮೆರವಣಿಗೆ ಪ್ರಾರಂಭಿಸಿ, ಕಾಂಗ್ರೆಸ್ ಪಕ್ಷದ ಕಚೇರಿವರೆಗೆ ಹೆಜ್ಜೆ ಹಾಕಿದರು. ಈ ಸಂದರ್ಭದಲ್ಲಿ ಗೋ ಬ್ಯಾಕ್ ಸಂಯುಕ್ತ ಪಾಟೀಲ್ ,‌ ಧಿಕ್ಕಾರ ಎಂಬುವ ನಾಮಫಲಕ ಹಾಗೂ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಡಿಸಿಸಿ ಬ್ಯಾಂಕಿನ ಎದುರಿಗೆ ಪೊಲೀಸರು ತಡೆ ಹಿಡಿದರು. ಕಾಂಗ್ರೆಸ್ ಪಕ್ಷದ ಕಚೇರಿ ಹತ್ತಿರ ಬಿಡದೆ ತಡೆದಿದ್ದರಿಂದ ಪೊಲೀಸರು ಹಾಗೂ ಕಾರ್ಯಕರ್ತರ ಮಧ್ಯೆ ವಾಗ್ದಾನ ನಡೆಯಿತು.

ಇದೇ ಸಮಯದಲ್ಲಿ ಕಾರ್ಯಕರ್ತರು ಟಯರ್ ಗೆ ಬೆಂಕಿಗೆ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಬ್ಯಾರಿಕೇಡ್ ತಳ್ಳಿದ ಬೆಂಬಲಿಗರು, ಕಚೇರಿ ಒಳಗೆ ನುಗ್ಗಲು ಯತ್ನಿಸಿದರು. ಈ ವೇಳೆ ಪ್ರತಿಭಟನಕಾರರನ್ನು ತಡೆಯಲು ಪೊಲೀಸರು ಹರಸಾಹಸ ಪಡಬೇಕಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News