×
Ad

ಅಮಿತ್ ಶಾ ಹೇಳಿಕೆ ಖಂಡಿಸಿ ಕರೆ ನೀಡಿದ್ದ ಬಾಗಲಕೋಟೆ ನಗರ ಬಂದ್‌ ಯಶಸ್ವಿ

Update: 2025-01-20 22:22 IST

ಬಾಗಲಕೋಟೆ : ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ, ದಲಿತ ಪರ ವಿವಿಧ ಸಂಘಟನೆಗಳು ಬಾಗಲಕೋಟೆ ನಗರ ಬಂದ್‌ಗೆ ಕರೆ ನೀಡಿದ್ದವು. ಬಂದ್ ಸಂಪೂರ್ಣ ಯಶಸ್ವಿಯಾಗಿದ್ದು, ನಗರದಲ್ಲಿ ವಾಹನ ಸಂಚಾರ, ವ್ಯಾಪಾರ-ವಹಿವಾಟು ಸ್ತಬ್ದವಾಗಿತ್ತು.

ಆಮಿತ್ ಶಾ ಇತ್ತೀಚೆಗೆ ‌ಸಂಸತ್ ಭವನದಲ್ಲಿ ಅಂಬೇಡ್ಕರ್ ಬಗ್ಗೆ ಹೇಳಿಕೆ ನೀಡಿರುವುದನ್ನು ಖಂಡಿಸಿ, ವಿವಿಧ ದಲಿತ ಪರ ಸಂಘಟನೆಗಳು ಹಾಗೂ ಅಲ್ಪಸಂಖ್ಯಾತ ಮುಖಂಡರು ಬಂದ್‌ಗೆ ಕರೆ ನೀಡಿದ್ದರಿಂದ ಬೆಳಗಿನ ಜಾವ 7 ಗಂಟೆಯಿಂದ ವಾಹನ ಸಂಚಾರ ಸ್ಥಗಿತ ಗೊಳಿಸಲಾಗಿತ್ತು.

ಅಂಗಡಿ ಮುಗ್ಗಟ್ಟು ಸಂಪೂರ್ಣ ಬಂದ್ ಆಗಿದ್ದವು. ಸಂಘಟನೆ ವಿವಿಧ ಮುಖಂಡರು ಹಾಗೂ ಕಾರ್ಯಕರ್ತರು ಬೈಕ್ ರ್ಯಾಲಿ ನಡೆಸಿದರು.

ಅಂಬೇಡ್ಕರ್ ಪುತ್ಥಳಿಗೆ ಮಾರ್ಲಾಪಣೆ ಮಾಡಿ, ನಗರದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸಲಾಯಿತು. ಅಮಿತ್ ಶಾ ವಿರುದ್ಧ ಘೋಷಣೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು

ಬೆಳಗ್ಗೆ 6 ಗಂಟೆಯಿಂದ ಪ್ರಾರಂಭವಾದ ಬಂದ್, ಸಂಜೆ 6 ಗಂಟೆಯವರೆಗೆ ನಡೆಸಲಾಯಿತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News