×
Ad

ಬಜ್ಪೆ: ಗಾಂಜಾ ವ್ಯಸನಿಯ ಬಂಧನ

Update: 2023-12-20 10:26 IST
ಸಾಂದರ್ಭಿಕ ಚಿತ್ರ Photo: freepik

ಬಜ್ಪೆ, ಡಿ.20: ಗಾಂಜಾ ಸೇವಿಸಿದ್ದ ಯುವಕನೋರ್ವನನ್ನು ಬಜ್ಪೆ ಠಾಣಾ ಪೊಲೀಸರು ಕೆಂಜಾರು ಗ್ರಾಮದ ಕರಂಬಾರು ಎಂಬಲ್ಲಿ ಬುಧವಾರ ಬಂಧಿಸಿದ್ದಾರೆ.

ಬಂಧಿತನನ್ನು ಕಾವೂರು ಪಂಜಿಮೊಗರು ಉರುಂದಾಡಿ ಗುಡ್ಡೆ ನಿವಾಸಿ ಮಣಿಕಂಠ(25) ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯು ಕರಂಬಾರು ಬಳಿ ಅಮಲಿನಲ್ಲಿ ಇದ್ದಂತೆ ಕಂಡು ಬಂದಿದ್ದು, ಆತನನ್ನು ತಡೆದು ವಿಚಾರಿಸಿದಾಗ ಸೀಗರೇಟ್ ಒಳಗೆ ಗಾಂಜಾ ತುಂಬಿಸಿ ಸೇದುತ್ತಿರುವುದಾಗಿ ಒಪ್ಪಿಕೊಂಡಿದ್ದಾನೆ. ಬಳಿಕ ಆತನನ್ನು ಎಜೆ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿರುವುದು ಧೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಸಿಕೊಂಡು‌ ಮುಂದಿನ ಕ್ರಮ ವಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News