ಬೆಂಗಳೂರು| ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ: ವ್ಯಕ್ತಿ ಸಜೀವ ದಹನ
Update: 2023-12-26 20:33 IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಓರ್ವ ವ್ಯಕ್ತಿ ಸಜೀವ ದಹನವಾಗಿರುವ ದಾರುಣ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯದ ಬಳಿ ಮಂಗಳವಾರ ವರದಿಯಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಬರುವಷ್ಟರಲ್ಲಿ ಕಾರು ಸಂಪೂರ್ಣ ಸುಟ್ಟು ಹೋಗಿದೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ದೌಡಾಯಿಸಿದ್ದು, ಈ ಘಟನೆಯಿಂದ ಕಿಲೋ ಮೀಟರ್ ಗಟ್ಟಲೇ ಸಂಚಾರ ದಟ್ಟಣೆ ಉಂಟಾಗಿತ್ತು ಎಂದು ತಿಳಿದುಬಂದಿದೆ. ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ಗೊತ್ತಾಗಿದೆ.