×
Ad

ಬಿಜೆಪಿ ಸರಕಾರದಲ್ಲಿ ರೂಪಿಸಿದ್ದ ಅಲ್ಪಸಂಖ್ಯಾತ ವಿರೋಧಿ ಕಾನೂನುಗಳನ್ನು ರದ್ದುಗೊಳಿಸಿ: ಮನವಿ

Update: 2024-02-21 23:38 IST

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಹಿಂದಿನ ಬಿಜೆಪಿ ಸರಕಾರವು ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದ ವಿರುದ್ಧ ಕಾನೂನುಗಳನ್ನು ರೂಪಿಸಿದ್ದು, ಆ ಎಲ್ಲ ಕಾನೂನುಗಳನ್ನು ಕೂಡಲೇ ರದ್ದು ಮಾಡಬೇಕು ಎಂದು ಮಜ್ಲಿಸೆ ಇಸ್ಲಾಹ-ವ-ತಂಝೀವ್, ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದೆ.

ಬುಧವಾರ ವಿಧಾನಸೌಧದಲ್ಲಿ ಮಜ್ಲಿಸೆ ಇಸ್ಲಾಹ-ವ-ತಂಝೀವ್ ನೇತೃತ್ವದ ನಿಯೋಗದ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಕೋಮುವಾದಿ ಅಜೆಂಡಾ ಹೊಂದಿರುವ ‘ಹಿಜಾಬ್, ಹಿಂದುಳಿದ ವರ್ಗಗಳ ಪ್ರವರ್ಗ 2 ‘ಬಿ’ ಮೀಸಲಾತಿ ರದ್ದು, ಮತಾಂತರ ನಿಷೇಧ ಕಾಯ್ದೆ ಹಾಗೂ ಜಾನುವಾರು ಹತ್ಯೆ ನಿಷೇಧ ಕಾನೂನುಗಳನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿತು.

ಬಿಜೆಪಿ ಸರಕಾರದ ಕೋಮುವಾದಿ ಮತ್ತು ಫ್ಯಾಸಿಸ್ಟ್ ನೀತಿಯನ್ನು ಧಿಕ್ಕರಿಸಿದ ಕರ್ನಾಟಕ ರಾಜ್ಯದ ಜನತೆ ವಿಶೇಷವಾಗಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವು ಐಕ್ಯಮತದಿಂದ ಕಾಂಗ್ರೆಸ್ ನೇತೃತ್ವದ ಸರಕಾರವನ್ನು ಆಯ್ಕೆ ಮಾಡಲು ತೀರ್ಮಾನಿಸಿದ್ದು, ತಮ್ಮನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಬಂದಿದೆ ಎಂದು ನಿಯೋಗವು ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News