×
Ad

BENGALURU | ನೆಲಮಂಗಲದಲ್ಲಿ ಖಾಸಗಿ ಬಸ್ ಬೆಂಕಿಗಾಹುತಿ: 40 ಪ್ರಯಾಣಿಕರು ಪಾರು

Update: 2026-02-06 10:18 IST

ಬೆಂಗಳೂರು: ಖಾಸಗಿ ಬಸ್ಸೊಂದು ಬೆಂಕಿಗಾಹುತಿಯಾದ ಘಟನೆ ತುಮಕೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಸಮೀಪ ಇಂದು ಮುಂಜಾವ ಸಂಭವಿಸಿದೆ.

ಬೆಂಗಳೂರಿನಿಂದ ಕಲಬುರಗಿಗೆ ತೆರಳುತ್ತಿದ್ದ ‘ಸಂಜನಾ ಟ್ರಾವೆಲ್ಸ್’ಎಂಬ ಖಾಸಗಿ ಸಂಸ್ಥೆಗೆ ಸೇರಿದ ಈ ಬಸ್ ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಸಮೀಪ ತಲುಪಿದಾಗ ಬಸ್ ಚರಂಡಿಯ ಸ್ಲ್ಯಾಬ್ ಗೆ ಢಿಕ್ಕಿಯಾಗಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕ್ಷಣಾರ್ಧದಲ್ಲಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಘಟನೆಯ ವೇಳೆ ಬಸ್ಸಿನಲ್ಲಿ ಸುಮಾರು 40 ಪ್ರಯಾಣಿಕರಿದ್ದು, ಬೆಂಕಿ ಬಸ್ಸನ್ನು ಆವರಿಸಿಕೊಳ್ಳುತ್ತಿದ್ದಂತೆ ಪ್ರಯಾಣಿಕರು ತುರ್ತಾಗಿ ಬಸ್ಸಿನಿಂದ ಇಳಿದು ಪಾರಾಗಿದ್ದಾರೆ. ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಅದರಲ್ಲಿದ್ದ ಪ್ರಯಾಣಿಕರ ಲಗೇಜ್, ಬೆಲೆಬಾಳುವ ವಸ್ತುಗಳು ಸುಟ್ಟು ಭಸ್ಮವಾಗಿವೆ.

ಸ್ಥಳಕ್ಕೆ ತಕ್ಷಣ ಆಗಮಿಸಿದ ನೆಲಮಂಗಲ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅವಘಡ ತಪ್ಪಿಸಿದ್ದಾರೆ.

ನೆಲಮಂಗಲ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News