×
Ad

ಬೆಂಗಳೂರಿನಲ್ಲಿ ಮತ್ತೊಂದು ಕ್ರಿಕೆಟ್‌ ಸ್ಟೇಡಿಯಂ; ಸಿಎಂ ಅನುಮೋದನೆ

Update: 2025-08-10 19:33 IST

ಸಾಂಸರ್ಭಿಕ ಚಿತ್ರ | PC : freepik

ಬೆಂಗಳೂರು : ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತದಿಂದ ಎಚ್ಚೆತ್ತುಕೊಂಡ ರಾಜ್ಯ ಸರಕಾರ ಬೆಂಗಳೂರಿನಲ್ಲಿಯೇ ಮತ್ತೊಂದು ಹೊಸ ಸ್ಟೇಡಿಯಂ ನಿರ್ಮಾಣಕ್ಕೆ ಮುಂದಾಗಿದೆ.

ಬೆಂಗಳೂರಿನ ಬೊಮ್ಮಸಂದ್ರದ ಸೂರ್ಯ ನಗರದಲ್ಲಿ 80,000 ಆಸನ ಸಾಮರ್ಥ್ಯದ ಕ್ರಿಕೆಟ್ ಸ್ಟೇಡಿಯಂ ಹೊಂದಿರುವ ವಿಶ್ವ ದರ್ಜೆಯ ಕ್ರೀಡಾ ಸಂಕೀರ್ಣವನ್ನು ನಿರ್ಮಿಸುವ ಕರ್ನಾಟಕ ವಸತಿ ಮಂಡಳಿ(ಕೆಎಚ್‌ಬಿ)ಯ ಪ್ರಸ್ತಾವನೆಗೆ ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ಅನುಮೋದನೆ ನೀಡಿದ್ದಾರೆ.

ಪ್ರಸ್ತಾವಿತ ಕ್ರೀಡಾ ಸಂಕೀರ್ಣ 100 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಲಿದ್ದು, ಇದು ಒಳಾಂಗಣ ಮತ್ತು ಹೊರಾಂಗಣ ಕ್ರೀಡೆಗಳಿಗೆ ಅವಕಾಶ ಕಲ್ಪಿಸುತ್ತದೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News