×
Ad

ಕರ್ತವ್ಯಕ್ಕೆ ಹಾಜರಾಗದ ಆಶಾ ಕಾರ್ಯಕರ್ತೆಯರ ಮಾಹಿತಿಗೆ ಸೂಚನೆ

Update: 2025-08-11 23:50 IST

PC : PTI 

ಬೆಂಗಳೂರು, ಆ.11: ನಾಳೆಯಿಂದ (ಆ.12) ಆ.14ರ ವರೆಗೆ ಜಿಲ್ಲಾ ವ್ಯಾಪ್ತಿಯಲ್ಲಿ ಕರ್ತವ್ಯಕ್ಕೆ ಹಾಜರಾಗದ ಆಶಾ ಕಾರ್ಯಕರ್ತೆಯರ ಮಾಹಿತಿಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಪಡೆದು ಜಿಲ್ಲಾಮಟ್ಟದಲ್ಲಿ ಕ್ರೋಡಿಕರಿಸಿ ಸಲ್ಲಿಸಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರು ಸೂಚನೆ ನೀಡಿದ್ದಾರೆ.

ಈ ಕುರಿತು ಸೋಮವಾರ ಸುತ್ತೋಲೆ ಹೊರಡಿಸಿದ್ದು, ಆಶಾ ಕಾರ್ಯಕರ್ತೆಯರಿಗೆ ಸರಕಾರ ಒದಗಿಸಿರುವ ಸೌಲಭ್ಯಗಳನ್ನು ಆಶಾ ಕಾರ್ಯಕರ್ತೆಯರಿಗೆ ಮನವರಿಕೆ ಮಾಡಿ, ಕಾನೂನು ಬಾಹಿರ ಹೋರಾಟದಲ್ಲಿ ಭಾಗವಹಿಸದಂತೆ ಮನವೊಲಿಸಬೇಕು ಎಂದು ತಿಳಿಸಿದ್ದಾರೆ.

ಆರೋಗ್ಯ ಇಲಾಖೆಯ ವತಿಯಿಂದ ಸಮುದಾಯ ಮಟ್ಟದಲ್ಲಿ ಕರ್ತವ್ಯ ನಿರ್ವಹಿಸುವ ಸಮುದಾಯ ಆರೋಗ್ಯ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು, ಅಂಗನವಾಡಿ ಕಾರ್ಯ ಕರ್ತೆಯರ ಸಹಕಾರವನ್ನು ಪಡೆದು ಸಾರ್ವಜನಿಕರ ಆರೋಗ್ಯ ಸೇವೆಯಲ್ಲಿ ಯಾವುದೇ ರೀತಿ ತೊಡಕಾಗದಂತೆ ಕ್ರಮ ವಹಿಸಬೇಕು. ಆರೋಗ್ಯ ಇಲಾಖೆಯ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ (ಖಾಯಂ, ಗುತ್ತಿಗೆ) ವೈದ್ಯಕೀಯ ತುರ್ತು ಹೊರತುಪಡಿಸಿ ಯಾವುದೇ ತರಹದ ರಜೆಯನ್ನು ನಿರ್ಬಂಧಿಸುವುದು. ಧರಣಿಯಲ್ಲಿ ಭಾಗವಹಿಸಿದ ಆಶಾ ಕಾರ್ಯಕರ್ತೆಯರ ಕಾರ್ಯಚಟುವಟಿಕೆಗಳನ್ನು ಜಾಲತಾಣಗಳಲ್ಲಿ ನಮೂದು ಮಾಡಿದ್ದಲ್ಲಿ ಸದರಿ ಕಾರ್ಯ ಚಟುವಟಿಕೆಗಳ ವಿವರಗಳನ್ನು ಕಡ್ಡಾಯವಾಗಿ ಜಾಲತಾಣದಲ್ಲಿ ಸತ್ಯಾಪನೆ ಮಾಡಬಾರದು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News