ಧರ್ಮಸ್ಥಳ ಪ್ರಕರಣ | ಸಂಸದ ಸಸಿಕಾಂತ್ ಸೆಂಥಿಲ್ ಕೈವಾಡವಿದೆ : ಜನಾರ್ದನ ರೆಡ್ಡಿ ಆರೋಪ
ಬೆಂಗಳೂರು, ಆ. 19: ‘ಧರ್ಮಸ್ಥಳ ಪ್ರಕರಣ’ ಒಂದು ವ್ಯವಸ್ಥಿತ ಷಡ್ಯಂತ್ರವಾಗಿದ್ದು, ಇದರ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಹಾಗೂ ತಮಿಳುನಾಡಿನ ಹಾಲಿ ಸಂಸದ ಸಸಿಕಾಂತ್ ಸೆಂಥಿಲ್ ಅವರ ಕೈವಾಡವಿದೆ ಎಂದು ಕೊಪ್ಪಳ ಜಿಲ್ಲೆ ಗಂಗಾವತಿ ಕ್ಷೇತ್ರದ ಬಿಜೆಪಿಯ ಶಾಸಕ ಜನಾರ್ದನ ರೆಡ್ಡಿ ಆರೋಪ ಮಾಡಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂಸದ ಸಸಿಕಾಂತ್ ಸೆಂಥಿಲ್ ಒತ್ತಡದ ಮೇರೆಗೆ ರಾಜ್ಯ ಸರಕಾರ ಧರ್ಮಸ್ಥಳ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡವನ್ನು(ಎಸ್‍ಐಟಿ) ರಚನೆ ಮಾಡಿದೆ. ಎಐಸಿಸಿ ಮುಖಂಡರಿಗೆ ಸಸಿಕಾಂತ್ ಸೆಂಥಿಲ್ ಆಪ್ತರು. ಎಸ್‍ಐಟಿ ರಚನೆಗೆ ಒತ್ತಡ ಹಾಕಿದ್ದಾರೆ. ಅನಾಮಿಕ ಮಾಸ್ಕ್ ಮ್ಯಾನ್ ತಮಿಳುನಾಡು ಮೂಲದವನಾಗಿದ್ದು, ಸಸಿಕಾಂತ್ ಸೆಂಥಿಲ್ ಅವರ ಜತೆ ನಿಕಟ ಸಂಬಂಧ ಹೊಂದಿದ್ದಾನೆ ಎಂದು ದೂರಿದರು.
ಸಸಿಕಾಂತ್ ಸೆಂಥಿಲ್ ವಿರುದ್ಧ ನಾನು ಮಾಡಿರುವ ಆರೋಪವನ್ನು ಸಾಬೀತುಪಡಿಸಲು ಸಿದ್ಧ. ನನ್ನ ಆರೋಪಕ್ಕೆ ಪೂರಕ ಮಾಹಿತಿ, ದಾಖಲೆಗಳು ತಮ್ಮ ಬಳಿ ಇವೆ ಎಂದು ಜನಾರ್ದನ ರೆಡ್ಡಿ ಇದೇ ವೇಳೆ ಸ್ಪಷ್ಟಣೆ ನೀಡಿದರು.