×
Ad

ಬೆಂಗಳೂರು | ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಸಂದೇಶ: ಪ್ರಕರಣ ದಾಖಲು

Update: 2025-08-29 19:40 IST
ಸಾಂದರ್ಭಿಕ ಚಿತ್ರ | PC : freepik

ಬೆಂಗಳೂರು, ಆ. 29: ನಗರದ ಹಲಸೂರು ಕೆರೆ ಸಮೀಪವಿರುವ ಗುರುಸಿಂಗ್ ಸಭಾ ಸಿಖ್ ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿರುವುದಾಗಿ ವರದಿಯಾಗಿದೆ.

5 ದಿನಗಳ ಹಿಂದೆಯೇ ಗುರುದ್ವಾರಕ್ಕೆ ಬೆದರಿಕೆ ಇ-ಮೇಲ್ ಬಂದಿದ್ದು, ಈ ಸಂಬಂಧ ಹಲಸೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

 ಗುರುದ್ವಾರದ ಅಧಿಕೃತ ಇ-ಮೇಲ್ ಐ.ಡಿ.ಗೆ ಬೆದರಿಕೆ ಸಂದೇಶ ಬಂದಿದ್ದು, ಗುರುದ್ವಾರದ ಶೌಚಾಲಯದಲ್ಲಿ ನಾಲ್ಕು ಆರ್‍ಡಿಎಕ್ಸ್ ಇರಿಸಲಾಗಿದ್ದು, ಅವುಗಳನ್ನು ಸ್ಫೋಟಿಸುವುದಾಗಿ ಇ-ಮೇಲ್‍ನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News