×
Ad

ಶಾಂತಿ, ಸುರಕ್ಷತೆ ಕಾಪಾಡಲು ಪೊಲೀಸರ ಪಾತ್ರ ಮಹತ್ತರ : ಥಾವರ್‌ ಚಂದ್ ಗೆಹ್ಲೋಟ್

‘ರಾಷ್ಟ್ರಪತಿಯವರ ಪದಕ ಪ್ರದಾನ ಸಮಾರಂಭ-2025’

Update: 2025-08-30 20:07 IST

ಬೆಂಗಳೂರು, ಆ.30 : ‘ರಾಜ್ಯ, ರಾಷ್ಟ್ರಗಳಲ್ಲಿ ಶಾಂತಿ, ಸುರಕ್ಷತೆ ಕಾಪಾಡಲು ಪೊಲೀಸರ ಪರಿಶ್ರಮ ಮಹತ್ತರವಾದದ್ದು. ಇವರು ಸೇವೆ, ಸಂಕಲ್ಪ, ನಿಷ್ಠೆ, ಸಾಹಸದಿಂದ ಜನರ ವಿಶ್ವಾಸ ಗಳಿಸಿದ್ದಾರೆ’ ಎಂದು ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ತಿಳಿಸಿದ್ದಾರೆ.

ಶನಿವಾರ ರಾಜಭವನದ ಗಾಜಿನ ಮನೆಯಲ್ಲಿ ರಾಜ್ಯ ಸರಕಾರ ಹಾಗೂ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ನಡೆದ ‘ರಾಷ್ಟ್ರಪತಿಯವರ ಪದಕ ಪ್ರದಾನ ಸಮಾರಂಭ-2025’ರಲ್ಲಿ ಪೊಲೀಸರಿಗೆ ಪದಕ ಪ್ರದಾನ ಮಾಡಿ ಅವರು ಮಾತನಾಡಿದರು.

ಕರ್ನಾಟಕ ಪೊಲೀಸರು ಪ್ರಕರಣಗಳನ್ನು ಬೇಧಿಸುವಲ್ಲಿ ಜನರ ವಿಶ್ವಾಸ ಗಳಿಸಿದ್ದಾರೆ. ಎಂಥಹ ಕಠಿಣ ಪರಿಸ್ಥಿತಿಯಲ್ಲೂ ಕಾನೂನು ರಕ್ಷಣೆ ಮಾಡಿ, ಜನರಿಗೆ ನ್ಯಾಯ ಕೊಡಿಸುವಲ್ಲಿ ಮುಂಚೂಣಿಯಲ್ಲಿದ್ದಾರೆ. ಇತ್ತೀಚೆಗೆ ಹೆಚ್ಚಾಗುತ್ತಿರುವ ಸೈಬರ್ ಅಪರಾಧಗಳನ್ನು ತಡೆಯಲು ಸಹ ಪೊಲೀಸರು ಶ್ರಮಿಸುತ್ತಿದ್ದಾರೆ ಎಂದು ಗೆಹ್ಲೋಟ್ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಸೇವಾ ಪದಕಗಳ ಹಿಂದೆ ಪರಿಶ್ರಮ, ಪ್ರಾಮಾಣಿಕತೆ, ಸಾಮಾಜಿಕ ಕಳಕಳಿ ಇದೆ. ಶಾಂತಿ, ಆಸ್ತಿ, ಜೀವ, ಮಾನ ರಕ್ಷಣೆ ಮಾಡುವ ಪೊಲೀಸರ ಜವಾಬ್ದಾರಿ ಬಹಳ ಹೆಚ್ಚಿದೆ ಎಂದರು.

ಸಮಾಜದಲ್ಲಿ ಅನೇಕ ರೀತಿಯ ಅಪರಾಧಗಳು ನಡೆಯುತ್ತವೆ. ಈ ಅಪರಾಧಗಳ ಸಂಖ್ಯೆ ಕಡಿಮೆ ಮಾಡುವುದು ಸರಕಾರ ಹಾಗೂ ಪೊಲೀಸರ ಜವಾಬ್ದಾರಿಯಾಗಿದೆ. ಅಪರಾಧಗಳನ್ನು ಆದಷ್ಟೂ ಕಡಿಮೆ ಮಾಡುವ ನಿಟ್ಟಿನಲ್ಲಿ ನಾವು ನಿಗಾ ವಹಿಸಬೇಕು. ಅವುಗಳನ್ನು ತಡೆಯುವಲ್ಲಿ ಮುಂಜಾಗ್ರತಾ ಕ್ರಮಗಳನ್ನು ಸಹ ವಹಿಸಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.

ಇದೇ ವೇಳೆಯಲ್ಲಿ ರಾಷ್ಟ್ರಪತಿಯವರ ವಿಶಿಷ್ಟ ಸೇವಾ ಪದಕದ ಸೇರಿದಂತೆ ವಿವಿಧ ಪದಕಗಳನ್ನು ತಮ್ಮ ಮುಡಿಗೇರಿಸಿಕೊಂಡ ಪೊಲೀಸರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆಗಳನ್ನು ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಸಿಎಂ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ, ಒಳಾಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷರ್ ಗಿರಿನಾಥ್ ಸೇರಿದಂತೆ ಪೊಲೀಸ್ ಹಿರಿಯ ಅಧಿಕಾರಿಗಳು ಮತ್ತು ಗಣ್ಯರು ಉಪಸ್ಥಿತರಿದ್ದರು.

ಪೆÇಲೀಸರು ತಮ್ಮ ಕರ್ತವ್ಯ ನಿರ್ವಹಿಸುವಾಗ ಹಲವು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಕೆಲವೊಮ್ಮೆ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟು ಕೆಲಸ ನಿರ್ವಹಿಸುವ ಸಂದರ್ಭ ಬರುತ್ತದೆ. ಎμÉ್ಟೂೀ ಪೆÇಲೀಸರು ಕರ್ತವ್ಯದ ವೇಳೆ ಪ್ರಾಣ ತ್ಯಾಗ ಸಹ ಮಾಡಿದ್ದಾರೆ. ಇವರ ನಿಸ್ವಾರ್ಥ ಸೇವೆ ಇತರರಿಗೆ ಮುಂದಿನ ಪೀಳಿಗೆಗೆ ಮಾದರಿಯಾಗಬೇಕು ಎಂದು ಜಿ.ಪರಮೇಶ್ವರ್ ಹೇಳಿದರು.

2 ವರ್ಷಗಳಲ್ಲಿ ಶೇ.99ರಷ್ಟು ಕೊಲೆ ಪ್ರಕರಣ ಬೇಧಿಸಿದ ಪೆÇಲೀಸ್ ಇಲಾಖೆ: ಡಾ.ಜಿ.ಪರಮೇಶ್ವರ್

ಈ ವೇಳೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಹಿಂದಿನ 2 ವರ್ಷಗಳಿಂದ ಪೊಲೀಸ್ ಇಲಾಖೆ ಕೊಲೆ ಪ್ರಕರಣಗಳನ್ನು ಶೇ.99ರಷ್ಟು ಬೇಧಿಸುವಲ್ಲಿ ಸಫಲವಾಗಿದೆ. ಜನರ, ರಾಜಕಾರಣಿಗಳ ಟೀಕೆ, ಟಿಪ್ಪಣಿ ನಡುವೆಯೂ ಇಲಾಖೆ ಸಮರ್ಥವಾಗಿ ಕೆಲಸ ನಿರ್ವಹಿಸುತ್ತಿದ್ದು, ಟೀಕೆಗಳನ್ನು ಸಲಹೆ ರೂಪದಲ್ಲಿ ತೆಗೆದುಕೊಳ್ಳಲಾಗಿದೆ ಎಂದರು.

ಕರ್ನಾಟಕ ಪೊಲೀಸ್ ಪಡೆ ರಾಷ್ಟ್ರದಲ್ಲಿಯೇ ಹೆಸರುವಾಸಿಯಾಗಿದೆ. ಜನ ಸಾಮಾನ್ಯರ ನಿರೀಕ್ಷೆಗೆ ತಕ್ಕಂತೆ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದೆ. ಇತ್ತೀಚೆಗೆ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ರಾಜ್ಯದಲ್ಲಿ ಹತ್ತೂವರೆ ಲಕ್ಷ ಕೋಟಿ ಬಂಡಾವಳ ಹೂಡಿಕೆಯಾಗಿದ್ದು ಹೆಮ್ಮೆಯ ಸಂಗತಿ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News