ಝಮೀರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ವಿಚಾರಣೆಗಾಗಿ ಕೆಜಿಎಫ್ ಬಾಬುಗೆ ನೋಟಿಸ್
Update: 2025-09-03 22:20 IST
ಬೆಂಗಳೂರು, ಸೆ.3: ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಂಬಂಧ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು ಉದ್ಯಮಿ ಕೆಜಿಎಫ್ ಬಾಬು ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಬುಧವಾರ ನೋಟಿಸ್ ನೀಡಿದ್ದಾರೆ.
ಈ ಪ್ರಕರಣದ ತನಿಖೆ ವೇಳೆ ಕೆಜಿಎಫ್ ಬಾಬು ಮತ್ತು ಝಮೀರ್ ಅಹ್ಮದ್ ನಡುವೆ ಹಣದ ವ್ಯವಹಾರ ನಡೆದಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಕೆಜಿಎಫ್ ಬಾಬುಗೆ ನೋಟಿಸ್ ನೀಡಿರುವ ಪೊಲೀಸರು, 7 ದಿನಗಳೊಳಗೆ ವಿಚಾರಣೆಗೆ ಬರುವಂತೆ ನೋಟಿಸ್‍ನಲ್ಲಿ ಉಲ್ಲೇಖಿಸಿರುವುದಾಗಿ ಮೂಲಗಳು ತಿಳಿಸಿವೆ.
ಇದೇ ಪ್ರಕರಣದಲ್ಲಿ ಝಮೀರ್ ಅವರಿಗೆ 2 ಕೋಟಿ ರೂ. ಸಾಲ ನೀಡಿದ್ದ ನಟಿ ರಾಧಿಕಾ ಕುಮಾರಸ್ವಾಮಿ ಅವರೂ ಇತ್ತೀಚೆಗೆ ಲೋಕಾಯುಕ್ತ ಪೊಲೀಸರ ವಿಚಾರಣೆ ಎದುರಿಸಿದ್ದರು.