×
Ad

ʼಡಾ.ಟಿ.ವಿ.ವೆಂಕಟಾಚಲ ಶಾಸ್ತ್ರಿ ವಿದ್ವತ್ ಪ್ರಶಸ್ತಿʼಗೆ ಡಾ.ಬಿ.ಎಸ್.ಪ್ರಣತಾರ್ತಿ ಹರನ್ ಆಯ್ಕೆ

Update: 2025-09-06 20:44 IST

ಸಾಂದರ್ಭಿಕ ಚಿತ್ರ

ಬೆಂಗಳೂರು, ಸೆ.6: ಕಸಾಪದ ಪ್ರತಿಷ್ಟಿತ ಡಾ.ಟಿ.ವಿ.ವೆಂಕಟಾಚಲ ಶಾಸ್ತ್ರಿ ವಿದ್ವತ್ ದತ್ತಿ ಪ್ರಶಸ್ತಿಗೆ ಸಂಶೋಧಕ ಡಾ.ಬಿ.ಎಸ್.ಪ್ರಣತಾರ್ತಿ ಹರನ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಸಾಪ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ತಿಳಿಸಿದ್ದಾರೆ.

ಶನಿವಾರ ಪ್ರಕಟನೆ ನೀಡಿರುವ ಅವರು, ಕನ್ನಡದ ಹಿರಿಯ ವಿದ್ವಾಂಸ ಡಾ.ಟಿ.ವಿ.ವೆಂಕಟಾಚಲ ಶಾಸ್ತ್ರಿಯವರ ಅಭಿಮಾನಿಗಳು ಮತ್ತು ಬಂಧುಗಳು 2001ರಲ್ಲಿ ಪರಿಷತ್‍ನಲ್ಲಿ ಈ ದತ್ತಿ ನಿಧಿಯನ್ನು ಸ್ಥಾಪಿಸಿದ್ದು ಡಾ.ಟಿ.ವಿ.ವೆಂಕಟಾಚಲ ಶಾಸ್ತ್ರಿಗಳು ಕಾರ್ಯ ನಿರ್ವಹಿಸಿದ ಹಳಗನ್ನಡ ಸಾಹಿತ್ಯದ ಅಧ್ಯಯನ, ಛಂದಸ್ಸು, ವ್ಯಾಕರಣ, ನಿಘಂಟು ರಚನೆ, ಗ್ರಂಥ ಸಂಪಾದನೆ, ಭಾಷಾ ಶಾಸ್ತ್ರ ಮೊದಲಾದ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸಿರುವವರನ್ನು ಈ ಪುರಸ್ಕಾರಕ್ಕೆ ಆಯ್ಕೆ ಮಾಡಬೇಕೆಂಬುದು ದತ್ತಿಯ ಆಶಯವಾಗಿದೆ ಎಂದು ತಿಳಿಸಿದ್ದಾರೆ.

ಡಾ.ಮಹೇಶ ಜೋಶಿಯವರ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಪ್ರಶಸ್ತಿಯ ಆಯ್ಕೆ ಸಮಿತಿ ಸಭೆಯಲ್ಲಿ ದತ್ತಿದಾನಿಗಳ ಪರವಾಗಿ ಟಿ.ವಿ.ಚಿತ್ಕಲಾ, ಎಲ್.ಎಸ್.ಶಿವಮೂರ್ತಿ, ಪರಿಷತ್‍ನ ಗೌರವ ಕಾರ್ಯದರ್ಶಿ ಬಿ.ಎಂ.ಪಟೇಲ್ ಪಾಂಡು, ಎಚ್.ಬಿ.ಮದನ್‍ಗೌಡ, ಗೌರವ ಕೋಶಾಧ್ಯಕ್ಷ ಡಿ.ಆರ್.ವಿಜಯ ಕುಮಾರ್ ಭಾಗವಹಿಸಿ, ಡಾ.ಟಿ.ವಿ.ವೆಂಕಟಾಚಲ ಶಾಸ್ತ್ರಿ ವಿದ್ವತ್ ದತ್ತಿ ಪ್ರಶಸ್ತಿಗೆ ಸಂಶೋಧಕ ಡಾ.ಬಿ.ಎಸ್.ಪ್ರಣತಾರ್ತಿ ಹರನ್ ಅವರನ್ನು ಆಯ್ಕೆ ಮಾಡಲಾಯಿತು ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News