×
Ad

ಬೆಂಗಳೂರು | ಪಿಯು ವಿದ್ಯಾರ್ಥಿಗಳಿಂದ ರ‍್ಯಾಗಿಂಗ್‌ ಆರೋಪ: ಸಂತ್ರಸ್ತ ವಿದ್ಯಾರ್ಥಿ ತಂದೆ ದೂರು

Update: 2025-09-10 23:06 IST

ಸಾಂದರ್ಭಿಕ ಚಿತ್ರ | PC : freepik

ಬೆಂಗಳೂರು, ಸೆ.10: ವಸತಿ ನಿಲಯಕ್ಕೆ ಹೊಸದಾಗಿ ದಾಖಲಾಗಿದ್ದ 10ನೇ ತರಗತಿಯ ವಿದ್ಯಾರ್ಥಿಗೆ ಹಿರಿಯ ವಿದ್ಯಾರ್ಥಿಗಳು ರ‍್ಯಾಗಿಂಗ್‌ ಮಾಡಿರುವ ಆರೋಪದಡಿ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುವುದಾಗಿ ವರದಿಯಾಗಿದೆ.

ಸಂತ್ರಸ್ತ ವಿದ್ಯಾರ್ಥಿಯ ತಂದೆ ದೂರು ನೀಡಿದ್ದು, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತನ್ನ ಮಗನಿಗೆ ಬಟ್ಟೆ ಬಿಚ್ಚಿಸಿ ನೃತ್ಯ ಮಾಡುವಂತೆ ಒತ್ತಾಯಿಸಿ ಕಬ್ಬಿಣದ ಹ್ಯಾಂಗರ್‍ನಿಂದ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ.

ಈ ಬಗ್ಗೆ ಪ್ರಾಂಶುಪಾಲರು ಹಾಗೂ ವಾರ್ಡನ್ ಯಾವುದೇ ಕ್ರಮ ಕೈಗೊಂಡಿಲ್ಲ. ಸೆ.3 ರಿಂದ 6ರ ವರೆಗೆ ಕೋಣೆಯಲ್ಲಿ ತನ್ನ ಮಗನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News