ವಿಷ್ಣುವರ್ಧನ್, ಸರೋಜಾದೇವಿಗೆ ‘ಕರ್ನಾಟಕ ರತ್ನ’; ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಕೃತಜ್ಞತೆ ಸಲ್ಲಿಸಿದ ನಟಿಯರು
Update: 2025-09-12 18:27 IST
ಬೆಂಗಳೂರು, ಸೆ. 12: ಚಿತ್ರನಟ ಡಾ.ವಿಷ್ಣುವರ್ಧನ್ ಮತ್ತು ನಟಿ ಬಿ.ಸರೋಜಾದೇವಿ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿದ ಹಿನ್ನೆಲೆಯಲ್ಲಿ ಹಿರಿಯ ನಟಿಯರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು.
ಶುಕ್ರವಾರ ಡಿಸಿಎಂ ನಿವಾಸಕ್ಕೆ ಖುದ್ದು ಭೇಟಿ ನೀಡಿದ ನಟಿಯರಾದ ಜಯಮಾಲಾ, ಶೃತಿ ಹಾಗೂ ಮಾಳವಿಕಾ ಅವಿನಾಶ್ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಇತ್ತೀಚೆಗೆ ಡಿಸಿಎಂ ಭೇಟಿ ಮಾಡಿದ್ದ ನಟಿಯರು, ನಟ ವಿಷ್ಣುವರ್ಧನ್ ಮತ್ತು ಸರೋಜಾದೇವಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಮನವಿ ಮಾಡಿದರು.