ಮೂವರು ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ
Update: 2025-09-12 20:25 IST
ಬೆಂಗಳೂರು, ಸೆ.12 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್ ಅವರಿಗೆ ಪಶುಸಂಗೋಪನೆ, ಪಶು ವಿಜ್ಞಾನ ಮತ್ತು ಮೀನುಗಾರಿಕೆ ಇಲಾಖೆಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ತುಳಸಿ ಮದ್ದಿನೇನಿ ಅವರನ್ನು ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಅಲ್ಲದೇ, ರಾಜ್ಯ ಮೇಲ್ಮನವಿ ನ್ಯಾಯಾಧೀಕರಣದ ಮುಖ್ಯಸ್ಥರ ಹುದ್ದೆಯ ಜವಾಬ್ದಾರಿಯನ್ನು ಹೆಚ್ಚುವರಿಯಾಗಿ ವಹಿಸಲಾಗಿದೆ.
ಯೋಜನೆ, ಕಾರ್ಯಕ್ರಮ ನಿರ್ವಹಣೆ ಮತ್ತು ಸಾಂಖ್ಯಿಕ ಇಲಾಖೆಯ ಕಾರ್ಯದರ್ಶಿ ರಮಣ್‍ದೀಪ್ ಚೌಧರಿ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.