×
Ad

ಮದ್ದೂರು ಪ್ರಕರಣ : ಇನ್ಸ್‌ಪೆಕ್ಟರ್ ಅಮಾನತು

Update: 2025-09-12 21:16 IST

ಮಂಡ್ಯ, ಸೆ.12: ಮದ್ದೂರು ಪಟ್ಟಣದಲ್ಲಿ ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಘಟನೆಗೆ ಸಂಬಂಧಿಸಿದಂತೆ ಮದ್ದೂರು ಠಾಣೆಯ ಇನ್ಸ್‌ಪೆಕ್ಟರ್ ಶಿವಕುಮಾರ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಘಟನೆಯಲ್ಲಿ ಪೊಲೀಸರ ವೈಫಲ್ಯ ಕಾರಣ ಎಂಬುದು ತನಿಖೆಯಿಂದ ತಿಳಿಯಬೇಕು. ಆದರೆ, ಘಟನೆ ನಡೆದ ಸ್ಥಳದಲ್ಲಿ ಕರ್ತವ್ಯದಲ್ಲಿ ಇರದ ಕಾರಣ ಶಿವಕುಮಾರ್ ಅವರನ್ನು ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮಾಧ್ಯಮ ಪ್ರತಿನಿಧಿಗಳಿಗೆ ಸ್ಪಷ್ಟಪಡಿಸಿದರು.

ಘಟನೆಯನ್ನು ಪೊಲೀಸರು, ಜಿಲ್ಲಾಡಳಿತ ಸಮರ್ಥವಾಗಿ ನಿಭಾಯಿಸಿದೆ. ಮದ್ದೂರು ಪಟ್ಟಣ ಸಹಜ ಸ್ಥಿತಿಗೆ ಬಂದಿದೆ. ಇನ್ನು ಮುಂದೆ ಜಿಲ್ಲೆಯಲ್ಲಿ ಎಲ್ಲಿಯೂ ಇಂತಹ ಘಟನೆ ನಡೆದರೆ ನಿಮ್ಮನ್ನೇ ನೇರ ಹೊಣೆ ಮಾಡುತ್ತೇವೆ ಎಂದು ಜಿಲ್ಲಾಧಿಕಾರಿ, ಎಸ್ಪಿ ಅವರಿಗೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ ಎಂದು  ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News