ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗೆ ಒಗ್ಗೂಡಿ: ಸಿದ್ದರಾಮಯ್ಯ ಕರೆ
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಸಮಾರಂಭ
Update: 2025-09-15 15:10 IST
ಬೆಂಗಳೂರು: ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸೋಮವಾರ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಆಶಯಗಳ ಮೇಲೆ ನಿರಂತರ ದಾಳಿಗಳು ನಡೆಯುತ್ತಿರುವ ಈ ದುರಿತ ಕಾಲದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗೆ ಒಗ್ಗೂಡಿ ಕೈಜೋಡಿಸುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಸಚಿವ ಕೆ.ಎಚ್. ಮುನಿಯಪ್ಪ, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಎ.ಹಾರಿಸ್, ಸರಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.