×
Ad

ಕಾಲೇಜುಗಳಲ್ಲಿ ಆಯೋಜಿಸುವ ಕಾರ್ಯಕ್ರಮಗಳ ಕುರಿತು ಪೊಲೀಸರಿಗೆ ಮಾಹಿತಿ ನೀಡುವುದು ಕಡ್ಡಾಯ : ಸೀಮಂತ್ ಕುಮಾರ್ ಸಿಂಗ್

Update: 2025-09-20 19:07 IST

ಬೆಂಗಳೂರು, ಸೆ.20: ಇನ್ಮುಂದೆ ನಗರದ ಯಾವುದೇ ಕಾಲೇಜುಗಳಲ್ಲಿ ಆಯೋಜನೆಯಾಗುವ ಕಾರ್ಯಕ್ರಮಗಳ ಕುರಿತಂತೆ ಆಯಾ ಆಡಳಿತ ಮಂಡಳಿಯವರು ಮುಂಚಿತವಾಗಿಯೇ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸೂಚಿಸಿದ್ದಾರೆ.

ಅವಲಹಳ್ಳಿ ವ್ಯಾಪ್ತಿಯ ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಹೊಡೆದಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ನಗರದಲ್ಲಿ ಮಾಹಿತಿ ನೀಡಿದ ಅವರು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಓಣಂ ಸಂಭ್ರಮಾಚರಣೆ ಸಂದರ್ಭದಲ್ಲಿ ನರ್ಸಿಂಗ್ ಕಾಲೇಜಿನ ತೃತೀಯ ವರ್ಷದ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳ ನಡುವೆ ಗಲಾಟೆಯಾಗಿದ್ದು, ಈಗಾಗಲೇ 8 ಮಂದಿ ವಿದ್ಯಾಥಿಗಳನ್ನು ಕಾಲೇಜು ಆಡಳಿತ ಮಂಡಳಿಯವರು ನಿರ್ಬಂಧಿಸಿದ್ದಾರೆ. ಕಾನೂನು ಕ್ರಮ ಸಹ ಕೈಗೊಳ್ಳಲಾಗಿದೆ ಎಂದರು.

ಮುಂದಿನ ದಿನಗಳಲ್ಲಿ ಈ ರೀತಿ ಘಟನೆಗಳು ಮರುಕಳಿಸಬಾರದು. ಆದ್ದರಿಂದ ನಗರದ ಯಾವುದೇ ಕಾಲೇಜಿನಲ್ಲಿ ಆಯೋಜನೆಯಾಗುವ ಕಾರ್ಯಕ್ರಮಗಳ ಕುರಿತು ಪೊಲೀಸರೊಂದಿಗೆ ಮೊದಲೇ ಚರ್ಚಿಸಬೇಕು. ಕಾಲಮಿತಿ ನಿಗದಿಪಡಿಸಬೇಕು ಹಾಗೂ ಆಯೋಜಕರು ಕಾರ್ಯಕ್ರಮಗಳ ಪಟ್ಟಿಯನ್ನು ಪೊಲೀಸರೊಂದಿಗೆ ಹಂಚಿಕೊಳ್ಳಬೇಕು ಎಂದು ಸೀಮಂತ್ ಕುಮಾರ್ ಸಿಂಗ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News