ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರ ವೇತನ ಪಾವತಿಗಾಗಿ ಅನುದಾನ ಬಿಡುಗಡೆ
Update: 2025-10-14 21:32 IST
ಬೆಂಗಳೂರು, ಅ.14: ರಾಜ್ಯ ಸರಕಾರವು 2025-26ನೆ ಸಾಲಿಗೆ ಸಮಗ್ರ ರೋಗಗಳ ಪರಿವೀಕ್ಷಣಾ ಕಾರ್ಯಕ್ರಮದಡಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ನೌಕರರ ವೇತನ ಪಾವತಿಗಾಗಿ 2.05 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ.
ಸಾಂಕ್ರಾಮಿಕ ರೋಗಗಳಾದ ಚಿಕನ್ ಗುನ್ಯ, ಡೆಂಗ್ಯೂ ಹಾಗೂ ಮಲೆನಾಡು ಭಾಗದಲ್ಲಿ ಕಾಣಿಸಿಕೊಳ್ಳುವ ಕ್ಯಾಸನೂರು ಕಾಡಿನ ಖಾಯಿಲೆಗಳ ನಿಯಂತ್ರಣಕ್ಕಾಗಿ 50 ಕೋಟಿ ರೂ. ಅನುದಾನವನ್ನು ಪ್ರಸಕ್ತ ಬಜೆಟ್‍ನಲ್ಲಿ ಮೀಸಲಿಡಲಾಗಿದೆ. ಈಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಬೇಡಿಕೆಯ ಮೇರೆಗೆ ಗುತ್ತಿಗೆ ನೌಕರರ ವೇತನ ಪಾವತಿ ಹಣ ಬಿಡುಗಡೆ ಮಾಡಲಾಗಿದೆ.