ಡಿಸೆಂಬರ್‌ನಲ್ಲಿ ಸಂಪುಟ ಪುನರ್‌ರಚನೆ ಸಾಧ್ಯತೆ : ರಾಮಲಿಂಗಾರೆಡ್ಡಿ
ಬೆಂಗಳೂರು : ಡಿಸೆಂಬರ್‌ನಲ್ಲಿ ಸಚಿವ ಸಂಪುಟ ರಚನೆಯಾಗುವ ಸಾಧ್ಯತೆಯಿದೆ ಎಂದು ಸಾರಿಗೆ ಸಚಿವರ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸೆಂಬರ್‌ನಲ್ಲಿ ಸಚಿವ ಸಂಪುಟ ಪುನರ್ ರಚನೆ ಆಗಬಹುದು. ನಮ್ಮಲ್ಲಿ 7ರಿಂದ 8 ಮಂದಿ ಹಿರಿಯ ಶಾಸಕರಿದ್ದಾರೆ, ಅವರಿಗೂ ಅವಕಾಶ ಕೊಡಬೇಕಲ್ಲವೇ? ಎಂದು ಅವರು ಅಭಿಪ್ರಾಯ ಪಟ್ಟರು.
ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಉದ್ಯಮಿ ಮೋಹನ್ ದಾಸ್ ಪೈ ಬಿಎಂಟಿಸಿ ಬಗ್ಗೆ ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸರಕಾರಿ ವ್ಯವಸ್ಥೆಗಳಿಗೆ ಜನಪ್ರತಿನಿಧಿಗಳು ಬೆಂಬಲ ಕೊಡಬೇಕು. ಆದರೆ, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಉದ್ಯಮಿ ಮೋಹನ್ ದಾಸ್ ಪೈ ಅವರು ‘ಮನೆಗೆ ಮಾರಿ, ಊರಿಗೆ ಉಪಕಾರಿ’ ಇದ್ದಂತೆ’ ಎಂದು ರಾಮಲಿಂಗಾ ರೆಡ್ಡಿ ಟೀಕಿಸಿದ್ದಾರೆ.
ಸಂಸ್ಥೆಯೊಂದರ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ತೇಜಸ್ವಿ ಸೂರ್ಯ ಮತ್ತು ಮೋಹನ್ ದಾಸ್ ಪೈ ಅವರು, ಬಿಎಂಟಿಸಿ ಬೇಡ ಎಂದು ಹೇಳಿಕೊಂಡಿದ್ದಾರೆ. ಆದರೆ, ಸರಕಾರಿ ವ್ಯವಸ್ಥೆಗಳಿಗೆ ಜನಪ್ರತಿನಿಧಿಗಳು ಬೆಂಬಲ ಕೊಡಬೇಕು ಎಂದು ಅವರು ತಿಳಿಸಿದರು.