×
Ad

ಬೆಂಗಳೂರು | ಕಿರುತೆರೆ ಕಲಾವಿದರಿಗೆ ವಂಚನೆ; ಐವರ ವಿರುದ್ಧ ಎಫ್‌ಐಆರ್‌

Update: 2025-10-14 23:42 IST

ಬೆಂಗಳೂರು, ಅ.14: ನಿವೇಶನ ಕೊಡಿಸುವುದಾಗಿ ನಂಬಿಸಿ 139 ಕಿರುತೆರೆ ನಟ–ನಟಿಯರಿಗೆ ವಂಚನೆ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಈ ಸಂಬಂಧ ಬಿಲ್ಡರ್ ಭಗೀರಥ ಹಾಗೂ ಸಂಜೀವ್ ತಗಡೂರು ಸೇರಿದಂತೆ ಐವರ ವಿರುದ್ಧ ರಾಜರಾಜೇಶ್ವರಿ ನಗರ ಪೆÇಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

2015ರಲ್ಲಿ ಸಂಜೀವ್ ತಗಡೂರು ಕೆಟಿವಿಎ ಸೈಟ್ ಸಮಿತಿಯ ಸದಸ್ಯರಾಗಿದ್ದು, ಬಿಲ್ಡರ್ ಜೊತೆಗೆ ತಾವರೆಕೆರೆ ಬಳಿ ಸೈಟ್ ಕೊಡಿಸುವ ವ್ಯವಹಾರ ನಡೆಸಿದ್ದರು. ಬಳಿಕ ಸದಸ್ಯರಿಂದ ಲಕ್ಷಾಂತರ ರೂಪಾಯಿ ಸಂಗ್ರಹಿಸಿ, ಶುದ್ದ ಕ್ರಯ ದಾಖಲೆಗಳನ್ನು ತಯಾರಿಸಿದ್ದರು. ಆದರೆ ಖಾತೆ ಮಾಡಿಸುವ ವೇಳೆ ನಕಲಿ ದಾಖಲೆಗಳು ಬೆಳಕಿಗೆ ಬಂದು ವಂಚನೆ ಬಯಲಾಗಿದೆ.

ನಕಲಿ ಲೇಔಟ್ ನಕ್ಷೆ ಮತ್ತು ನಕಲಿ ದಾಖಲೆಗಳನ್ನು ಸೃಷ್ಟಿಸಿ ಒಟ್ಟು 1.6 ಕೋಟಿ ರೂಪಾಯಿ ವಂಚನೆ ನಡೆದಿದೆ ಎಂದು ದೂರುದಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News