×
Ad

ಆರೆಸ್ಸೆಸ್ ನಿಷೇಧಿಸಬೇಕು; ದೇವೇಗೌಡರ ಮಾತು ನೆನಪಿಸಿದ ಸಚಿವ ಪ್ರಿಯಾಂಕ್ ಖರ್ಗೆ

Update: 2025-10-18 19:08 IST

ಬೆಂಗಳೂರು, ಅ. 18: ‘ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರೆಸ್ಸೆಸ್) ನಿಷೇಧವಾಗಬೇಕು’ ಎಂದು ಜೆಡಿಎಸ್ ರಾಷ್ಟ್ರೀಯಾಧ್ಯಕ್ಷ ಎಚ್.ಡಿ.ದೇವೇಗೌಡ ಅವರ ಮನ್ ಕಿ ಬಾತ್. ಈ ಮನದಾಳದದ ಮಾತುಗಳನ್ನು ಇಂದು ಮರೆತಿದ್ದಾರೆಯೇ ಅಥವಾ ಮರೆಯಲು ಪ್ರಯತ್ನಿಸುತ್ತಿದ್ದಾರೆಯೇ?’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ನೆನಪಿಸುವ ಮೂಲಕ, ಜೆಡಿಎಸ್‍ಗೆ ತಿರುಗೇಟು ನೀಡಿದ್ದಾರೆ.

ಶನಿವಾರ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪತ್ರಿಕೆಯೊಂದರ ಸುದ್ದಿಯ ತುಣಕನ್ನು ಹಂಚಿಕೊಂಡಿರುವ ಪ್ರಿಯಾಂಕ್ ಖರ್ಗೆ, ‘ಈ ಹಳೆಯ ಪಾಳೆಯುಳಿಕೆಯಂತಹ ಮಾತುಗಳನ್ನು ಈ ಸಂದರ್ಭದಲ್ಲಿ ಬಿಜೆಪಿಯವರಿಗೆ ನೆನಪು ಮಾಡಲು ಬಯಸುತ್ತೇನೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News