×
Ad

ಕರ್ನೂಲ್ ಬಸ್ ದುರಂತ: ಸಿಎಂ ಸಿದ್ದರಾಮಯ್ಯ ಸಂತಾಪ

Update: 2025-10-24 10:17 IST

ಬೆಂಗಳೂರು: ಆಂಧ್ರ ಪ್ರದೇಶದ ಕರ್ನೂಲ್ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್ ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 15 ಮಂದಿ ಸಜೀವ ದಹನಗೊಂಡಿರುವ ಘಟನೆಗೆ ರಾಜ್ಯ ಮುಖ್ಯಮಂತ್ರಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

''ಆಂಧ್ರ ಪ್ರದೇಶದ ಕರ್ನೂಲ್ನ ಬೆಂಗಳೂರು - ಹೈದರಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್ಗೆ ಬೆಂಕಿ ತಗುಲಿ ಹಲವು ಪ್ರಯಾಣಿಕರು ಪ್ರಾಣ ಕಳೆದುಕೊಂಡ ಸುದ್ದಿ ಕೇಳಿ ಅತೀವ ದುಃಖವಾಯಿತು. ದುರಂತದಲ್ಲಿ ಮಡಿದವರ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ'' ಎಂದು ಕಂಬನಿ ಮಿಡಿದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News