ವೈದ್ಯಕೀಯ, ದಂತ ವೈದ್ಯಕೀಯ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಮುಂದೂಡಿಕೆ
Update: 2025-10-27 19:13 IST
ಬೆಂಗಳೂರು, ಅ.27: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸೋಮವಾರದಂದು ಪ್ರಕಟಿಸಬೇಕಿದ್ದ ವೈದ್ಯಕೀಯ, ದಂತ ವೈದ್ಯಕೀಯ ಸೀಟುಗಳ 3ನೆ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಮುಂದೂಡಿದ್ದು, ಹೈಕೋರ್ಟ್ ಆದೇಶದಂತೆ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಈ ಸಂಬಂಧ ಪ್ರಕಟನೆ ಹೊರಡಿಸಿರುವ ಅವರು, ವೈದ್ಯಕೀಯ, ದಂತ ವೈದ್ಯಕೀಯ ಸೀಟುಗಳ 3ನೆ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಅ.29ರವರೆಗೂ ಪ್ರಕಟಿಸದಂತೆ ಹೈಕೋರ್ಟ್ ಸೂಚಿಸಿರುವ ಹಿನ್ನೆಲೆಯಲ್ಲಿ ಅಂತಿಮ ಫಲಿತಾಂಶ ಪ್ರಕಟಿಸಿಲ್ಲ ಎಂದು ಹೇಳಿದ್ದಾರೆ.