×
Ad

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು

Update: 2025-10-31 01:26 IST

ಬೆಂಗಳೂರು : ನಟ ಧ್ರುವ ಸರ್ಜಾ ಅವರ ಅಭಿಮಾನಿಗಳಿಂದ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಇಲ್ಲಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಮನೋಜ್(30) ಎಂಬುವರು ನಟ ಧ್ರುವ ಸರ್ಜಾ, ಅವರ ವ್ಯವಸ್ಥಾಪಕರು, ಕಾರು ಚಾಲಕ ಹಾಗು ಅಭಿಮಾನಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

ನಟ ಧ್ರುವ ಸರ್ಜಾ ಅವರ ನಿವಾಸದ ಬಳಿಯಿರುವ ಅಕ್ಕಪಕ್ಕದ ನಿವಾಸಿಗಳಿಗೆ ಅವರ ಅಭಿಮಾನಿಗಳಿಂದ ತೊಂದರೆಯುಂಟಾಗುತ್ತಿದೆ. ಪ್ರತಿನಿತ್ಯ ನಮ್ಮ ಮನೆ ಮುಂದೆ ಅಭಿಮಾನಿಗಳು ದ್ವಿಚಕ್ರ ವಾಹನದ ನಿಲುಗಡೆ ಮಾಡುತ್ತಾರೆ. ಅಲ್ಲದೇ, ಮನೆಯ ಮುಂದೆಯೇ ಧೂಮಪಾನ ಮಾಡುತ್ತಾರೆ. ಮನೆಯ ಗೋಡೆಯ ಮೇಲೆ ಉಗಿಯುತ್ತಾರೆ. ಇದ್ದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ಪ್ರತಿನಿತ್ಯ ತೊಂದರೆಯಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಬಗ್ಗೆ ಎಫ್‍ಐಆರ್ ದಾಖಲಿಸಿ ಕ್ರಮ ಜರುಗಿಸುವಂತೆ ದೂರಿನಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News