×
Ad

ಬೆಳಗಾವಿ | ಕಿತ್ತೂರು ತಾಲೂಕಿನ ಕಲಭಾವಿಯಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

Update: 2025-10-31 19:44 IST

ಬೆಳಗಾವಿ: ಜಿಲ್ಲೆಯ ಕಿತ್ತೂರು ತಾಲೂಕಿನ ಕಲಭಾವಿ ಗ್ರಾಮದ ಹೊರವಲಯದಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ಸ್ಥಳೀಯರಲ್ಲಿ ಭೀತಿಯ ವಾತಾವರಣ ಉಂಟುಮಾಡಿದೆ.

ಇಂದು (ಗುರುವಾರ) ಬೆಳಗಿನ ಜಾವ ರೈತರೊಬ್ಬರು ಮೇವು ತರಲು ಹೊಲಗಳಿಗೆ ತೆರಳಿದಾಗ ದೂರದಲ್ಲಿ ಚಿರತೆಯನ್ನು ಕಂಡು ತಕ್ಷಣ ಗ್ರಾಮಕ್ಕೆ ಬಂದು ವಿಷಯವನ್ನು ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ದೊರಕುತ್ತಿದ್ದಂತೆಯೇ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಪ್ಪಯ್ಯಪ್ಪ ಕುಂಬಾರ ಹಾಗೂ ಗ್ರಾಮ ಆಡಳಿತ ಅಧಿಕಾರಿ ಶ್ರೀದೇವಿ ಗಾಣಿಗೇರ ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು.

ಅದಾದ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಚಿರತೆಯ ಹಾದಿ ಪತ್ತೆಹಚ್ಚುವ ಕಾರ್ಯ ಆರಂಭಿಸಿದ್ದಾರೆ. ಚಿರತೆಯ ಚಲನವಲನವನ್ನು ಪತ್ತೆಹಚ್ಚಲು ಪಂಜರಗಳನ್ನು ಅಳವಡಿಸುವ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆ ನಂತರ ಗ್ರಾಮಸ್ಥರು ಭಯಭೀತರಾಗಿದ್ದು, ಮಕ್ಕಳು ಹಾಗೂ ಪಶುಸಕಾಣಿಕೆ ಮಾಡುವವರಿಗೆ ಎಚ್ಚರಿಕೆ ನೀಡಲಾಗಿದೆ. ಅ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News