ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್
ಬೆಂಗಳೂರು : ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರು ಇಂದು ಕರ್ನಾಟಕ ಪ್ರವಾಸ ಕೈಗೊಂಡಿದ್ದು, ಬೆಳಿಗಿನ ಜಾವ ಯಲಹಂಕ ಏರ್ ಫೋರ್ಸ್ ಸ್ಟೇಷನ್ ಗೆ ಆಗಮಿಸಿದರು.
ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉಪರಾಷ್ಟ್ರಪತಿಗಳಿಗೆ ಹೂಗುಚ್ಚ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.
ಈ ಸಮಯದಲ್ಲಿ ಕೇಂದ್ರದ ಬೃಹತ್ ಕೈಗಾರಿಕೆಗಳ ಸಚಿವರಾದ ಎಚ್.ಡಿ.ಕುಮಾರಸ್ವಾಮಿ, ನಗರಾಭಿವೃದ್ಧಿ ಸಚಿವರಾದ ಸುರೇಶ್ ಬಿ.ಎ (ಬೈರತಿ), ಸರಕಾರದ ಮುಖ್ಯಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ್, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾದ ಎಂ.ಎ.ಸಲೀಮ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ್ ಜಿ, ಜೆಡಿಎಸ್ ಮುಖಂಡರಾದ ಪುಟ್ಟರಾಜು, ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಉಪರಾಷ್ಟ್ರಪತಿಗಳು ಇಂದು ಬೆಂಗಳೂರಿನ ಯಲಹಂಕ ಏರ್ ಫೋರ್ಸ್ ಸ್ಟೇಷನ್ ನಿಂದ ಹೆಲಿಕಾಪ್ಟರ್ ಮೂಲಕ ಹಾಸನ ಜಿಲ್ಲೆಯ ಶ್ರವಣಬೆಳಗೊಳ, ಮಂಡ್ಯ ಜಿಲ್ಲೆಯ ಮೇಲುಕೋಟೆ ಹಾಗೂ ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಇಂದೇ ನವದೆಹಲಿಗೆ ಪ್ರಯಾಣಿಸುವರು.