ಮಲ್ಲೇಶ್ವರ ಬಾಂಬ್ ಸ್ಫೋಟ ಪ್ರಕರಣ | ಆರೋಪಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್
Update: 2025-12-03 00:42 IST
ಬೆಂಗಳೂರು : ಹನ್ನೆರಡು ವರ್ಷಗಳ ಹಿಂದೆ ನಗರದ ಮಲ್ಲೇಶ್ವರದ ಬಿಜೆಪಿ ಕಚೇರಿ ಎದುರು ಸಂಭವಿಸಿದ್ದ ಬಾಂಬ್ ಸ್ಫೋಟ ಪ್ರಕರಣದ 3ನೇ ಆರೋಪಿ ತಮಿಳುನಾಡು ಮೂಲದ ಕಿಚನ್ ಬುಹಾರಿಗೆ ಹೈಕೋರ್ಟ್ ಜಾಮೀನು ನಿರಾಕರಿಸಿದೆ.
ಪ್ರಕರಣದಲ್ಲಿ ಜಾಮೀನು ನಿರಾಕರಿಸಿ 2024ರ ಫೆಬ್ರವರಿ 23ರಂದು ಎನ್‌ಐಎ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಆದೇಶ ರದ್ದುಪಡಿಸಿ, ಜಾಮೀನು ಮಂಜೂರು ಮಾಡಬೇಕು ಎಂದು ಕೋರಿ ಕಿಚನ್ ಬುಹಾರಿ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಯನ್ನು ನ್ಯಾಯಮೂರ್ತಿ ಕೆ.ಎಸ್. ಮುದಗಲ್ ಹಾಗೂ ನ್ಯಾಯಮೂರ್ತಿ ಟಿ. ವೆಂಕಟೇಶ್ ನಾಯ್ಕ್ ಅವರಿದ್ದ ವಿಭಾಗೀಯ ಪೀಠ ಇತ್ತೀಚೆಗೆ ವಜಾಗೊಳಿಸಿದೆ.