×
Ad

ಭೂಗಳ್ಳತನ | ಹೆಡ್‍ಕಾನ್‍ಸ್ಟೇಬಲ್ ವಿರುದ್ಧ ಪ್ರಕರಣ ದಾಖಲು

Update: 2025-12-13 21:13 IST

ಬೆಂಗಳೂರು : ನೆಲಮಂಗಲದಲ್ಲಿ 25 ಕೋಟಿ ರೂ. ಮೌಲ್ಯದ ಭೂಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೆಲಮಂಗಲ ಗ್ರಾಮಾಂತರ ಠಾಣೆ ಹೆಡ್ ಕಾನ್ಸಟೇಬಲ್ ಗಿರಿಜೇಶ್ ಹೆಡ್‍ಕಾನ್‍ಸ್ಟೇಬಲ್ ವಿರುದ್ಧ ದಾಬಸ್‍ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆಲಮಂಗಲ ತಾಲೂಕು ಸೋಂಪುರ ಹೋಬಳಿ, ಮಾಚನಹಳ್ಳಿ ಗ್ರಾಮದಲ್ಲಿರುವ ಥ್ಯಾಂಪಿ ಮ್ಯಾಥ್ಯೂ ಅವರಿಗೆ ಸೇರಿದ 8 ಎಕರೆ ಜಮೀನನ್ನು ಅವರಿಗೆ ತಿಳಿಯದೆ ಮೂರ್ನಾಲ್ಕು ಜನರ ಮೂಲಕ ರಿಜಿಸ್ಟರ್ ಮಾಡಲಾಗಿದೆ. ಹೆಡ್‍ಕಾನ್‍ಸ್ಟೇಬಲ್ ಗಿರಿಜೇಶ್ ಸೇರಿದಂತೆ ಪ್ರಕರಣದಲ್ಲಿ ಭಾಗಿಯಾದ ಹಲವರ ವಿರುದ್ದ ಪ್ರಕರಣ ದಾಖಲಾಗಿದೆ.

ಈ ಜಮೀನು ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ ಸೇರಿದ್ದು, ಅದರ ಪರಿಹಾರ ಹಣ ಕಬಳಿಸಲು ಗಿರಿಜೇಶ್ ಯೋಜನೆ ರೂಪಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ನೋಂದಣಿ ಆಗದೇ ಇದ್ದರೂ ದಾಖಲೆಗಳಲ್ಲಿ ಗಿರಿಜೇಶ್ ಹಾಗೂ ಇನ್ನಿಬ್ಬರ ಹೆಸರುಗಳಿರುವುದು ಅನುಮಾನಕ್ಕೆ ಕಾರಣವಾಗಿದೆ. ಈ ಸಂಬಂಧ ಥ್ಯಾಂಪಿ ಮ್ಯಾಥ್ಯೂ ನೀಡಿದ ದೂರಿನ ಮೇರೆಗೆ ದಾಬಸ್‍ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News