ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಡಿಜಿಪಿ ಅಲೋಕ್ ಕುಮಾರ್ ಭೇಟಿ
ಬೆಂಗಳೂರು : ಸೋಮವಾರ ನಗರದಲ್ಲಿರುವ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿದ್ದಾರೆ. ಭೇಟಿ ವೇಳೆ ಜೈಲಿನ ಚೆಕ್ ಪೋಸ್ಟ್ ಬಳಿ ಸಿಬ್ಬಂದಿಯಿಂದ ಮಾಹಿತಿ ಪಡೆದರು.
ಅಧಿಕಾರಿಗಳ ಜೊತೆ ಜೈಲಿನ ಸುತ್ತಮುತ್ತ ಓಡಾಡಿ ಪರಿಶೀಲನೆ ನಡೆಸಿ ಹಾಗೂ ಪ್ರತಿ ಬ್ಯಾರಕ್‍ಗೂ ತೆರಳಿ ಮಾಹಿತಿ ಕಲೆಹಾಕಿ ಗಾಂಜಾ, ಬಿಡಿ ಸಿಗರೇಟ್ ಇನ್ನು ಮುಂದೆ ಸಿಗಲ್ಲ. ಎಲ್ಲ ಬಂದ್ ಆಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜೈಲಿನ ಪ್ರತಿ ಬ್ಯಾರಕ್‍ಗೂ ಭೇಟಿ ನೀಡಿರುವ ಡಿಜಿಪಿ, ಕೈದಿಗಳ ಬಳಿಯು ಮಾಹಿತಿ ಕಲೆ ಹಾಕಿದ್ದಾರೆ. ಊಟ, ತಿಂಡಿ, ಶೌಚಾಲಯ ವ್ಯವಸ್ಥೆ ಬಗ್ಗೆ ಕೈದಿಗಳಿಗೆ ಪ್ರಶ್ನೆ ಕೇಳಿದ್ದಾರೆ. ಮೊಬೈಲ್ ಬಳಕೆ ಮಾಡುತ್ತಿದ್ದಾರೆ ಕೂಡಲೆ ಸಿಬ್ಬಂದಿ ವಶಕ್ಕೆ ನೀಡುವಂತೆ ತಾಕೀತು ಮಾಡಿದ್ದಾರೆ. ಕಳ್ಳಾಟವಾಡಿದರೆ, ಇನ್ನು ಮುಂದೆ ಕಠಿಣ ಕ್ರಮ ಎದುರಿಸಲು ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ.
ಜೈಲಿನ ಅಡುಗೆ ಮನೆ, ಬೇಕರಿ, ಆಸ್ಪತ್ರೆಗೂ ಭೇಟಿ ನೀಡಿ, ವೈದ್ಯರು ಚಿಕಿತ್ಸೆ ಮಾತ್ರ ಕೋಡಬೇಕು. ಅದನ್ನು ಬಿಟ್ಟು ಮೊಬೈಲ್, ಗಾಂಜಾ ಸಾಗಾಣೆ ಮಾಡಿದ್ರೆ ಕ್ರಮ ಕೈಗೊಳ್ಳಲಾಗುತ್ತೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಇದೇ ವೇಳೆ ಐಜಿಪಿ ದಿವ್ಯಾ, ಡಿಸಿಪಿ ನಾರಾಯಣ, ಮುಖ್ಯ ಅಧೀಕ್ಷ ಕ ಅಂಶುಕುಮಾರ್, ಕಮಾಂಡರ್ ವೀರೇಶ್ ಕುಮಾರ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.