ಸುವರ್ಣ ಆರೋಗ್ಯ ಟ್ರಸ್ಟ್ ಅಡಿ ನವೀಕರಿಸಲು ಕೆಪಿಎಂಇ ಮಾನ್ಯತೆ ಕಡ್ಡಾಯ
Update: 2025-12-15 21:46 IST
ಬೆಂಗಳೂರು : ಸುವರ್ಣ ಆರೋಗ್ಯ ಟ್ರಸ್ಟ್ ಅಡಿಯಲ್ಲಿ ಹೊಸ ಆಸ್ಪತ್ರೆಗಳನ್ನು ಎಂಪಾನೆಲ್ ಮಾಡುವಾಗ ಅಥವಾ ನವೀಕರಿಸುವಾಗ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಯಿಂದ(ಕೆಪಿಎಂಇ) ಮಾನ್ಯತೆ ಹೊಂದಿರುವ ಪ್ರಮಾಣಪತ್ರ ಪರಿಗಣಿಸುವುದು ಕಡ್ಡಾಯವಾಗಿದೆ ಎಂದು ಸರಕಾರ ತಿಳಿಸಿದೆ.
ಈ ಸಂಬಂಧ ರಾಜ್ಯ ಸರಕಾರವು ಆದೇಶ ಹೊರಡಿಸಿದ್ದು, ಈ ಮೂಲಕ ಕಾನೂನುಬದ್ಧವಾಗಿ ನಡೆಯುತ್ತಿರುವ ಆಸ್ಪತ್ರೆಗಳನ್ನು ಮಾತ್ರ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನೆಟ್‍ವರ್ಕ್ ಆಸ್ಪತ್ರೆಗೆ ಸೇರಿಸಲು ಸಹಕಾರಿಯಾಗುತ್ತದೆ. ಈ ಪ್ರಕ್ರಿಯೆ ಆಡಳಿತಾತ್ಮಕ ದಕ್ಷತೆ ಹೆಚ್ಚಿಸುವುದಲ್ಲದೆ, ನಾಗರಿಕರಿಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ಸಹಕಾರಿಯಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.