×
Ad

ಕಾರಾಗೃಹಗಳ ವಿಶೇಷ ಕಾರ್ಯಾಚರಣೆಯಲ್ಲಿ ಮೊಬೈಲ್ ಫೋನ್, ಗಾಂಜಾ ವಶ: ಅಲೋಕ್ ಕುಮಾರ್

Update: 2025-12-17 22:19 IST

ಬೆಂಗಳೂರು : ರಾಜ್ಯದಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಮೊಬೈಲ್ ಫೋನ್‍ಗಳು ಮತ್ತು ಗಾಂಜಾ ಸೇರಿದಂತೆ ನಿಷೇಧಿತ ವಸ್ತುಗಳು ಪತ್ತೆಯಾಗಿದ್ದು, ಅವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕರ್ನಾಟಕ ಪೊಲೀಸ್ ಮಹಾನಿರ್ದೇಶಕ(ಕಾರಾಗೃಹ) ಅಲೋಕ್ ಕುಮಾರ್ ತಿಳಿಸಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಜೈಲಿನಿಂದ ಆರು ಮೊಬೈಲ್ ಫೋನ್‍ಗಳು ಮತ್ತು ನಾಲ್ಕು ಚಾಕುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಮೈಸೂರು ಜೈಲಿನಿಂದ ಒಂಬತ್ತು ಮೊಬೈಲ್ ಫೋನ್‍ಗಳು ಮತ್ತು 11 ಸಿಮ್ ಕಾರ್ಡ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

ಬೆಳಗಾವಿ ಜೈಲಿನಲ್ಲಿ ನಾಲ್ಕು ಮೊಬೈಲ್ ಫೋನ್‍ಗಳು ಮತ್ತು ಹೊರಗಿನಿಂದ ಎಸೆದ 366 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಮಂಗಳೂರು ಜೈಲಿನಿಂದ ನಾಲ್ಕು ಮೊಬೈಲ್ ಫೋನ್‍ಗಳು ಮತ್ತು ವಿಜಯಪುರ ಜೈಲಿನಿಂದ ಒಂದು ಮೊಬೈಲ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ' ಎಂದು ಅವರು ತಿಳಿಸಿದ್ದಾರೆ.

ಜೈಲುಗಳೊಳಗಿನ ಅಕ್ರಮ ಚಟುವಟಿಕೆಗಳನ್ನು ತಡೆಯಲು ಇಂತಹ ವಿಶೇಷ ಕಾರ್ಯಾಚರಣೆಗಳು ಮುಂದುವರಿಯುತ್ತವೆ ಎಂದು ತಿಳಿಸಿದರು.


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News