‘ಜಯದೇವಿತಾಯಿ ಲಿಗಾಡೆ, ಪ್ರಭುರಾವ ಕಂಬಳಿವಾಲೆ’ ಟ್ರಸ್ಟ್ ರಚಿಸಿ ರಾಜ್ಯ ಸರಕಾರ ಆದೇಶ
Update: 2026-01-06 21:33 IST
ಬೆಂಗಳೂರು : ಕರ್ನಾಟಕ ಏಕೀಕರಣ ಚಳವಳಿ ಮತ್ತು ಕನ್ನಡ ಸಾಹಿತ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡಿರುವ ಮಹಾನ್ ವ್ಯಕ್ತಿಗಳಾದ ಡಾ.ಜಯದೇವಿತಾಯಿ ಲಿಗಾಡೆ ಹಾಗೂ ಪ್ರಭುರಾವ ಕಂಬಳಿವಾಲೆ ಅವರ ಹೆಸರಿನಲ್ಲಿ ಬೀದರ್ ಜಿಲ್ಲೆಯಲ್ಲಿ ಟ್ರಸ್ಟ್ ಗಳನ್ನು ರಚಿಸಿ ಸರಕಾರ ಆದೇಶಿಸಿದೆ.
2025-26ನೇ ಸಾಲಿನ ಕ್ರಿಯಾ ಯೋಜನೆಯಲ್ಲಿ ಹೊಸದಾಗಿ ರಚನೆಯಾಗುವ ಟ್ರಸ್ಟ್ ಗಳಿಗೆ 35ಲಕ್ಷ ರೂ.ಗಳನ್ನು ಅವಕಾಶ ಮಾಡಿಕೊಳ್ಳಲಾಗಿದ್ದು, ಬೀದರ್ ಜಿಲ್ಲಾಧಿಕಾರಿ ಪ್ರಸ್ತಾವದಂತೆ ಜಯದೇವಿ ತಾಯಿ ಲಿಗಾಡೆ ಹಾಗೂ ಪ್ರಭುರಾವ ಕಂಬಳಿವಾಲೆ ಇವರ ಹೆಸರಿನಲ್ಲಿ ಟ್ರಸ್ಟ್ ರಚಿಸಲಾಗಿದೆ ಎಂದು ಕನ್ನಡ ಸಂಸ್ಕೃ ತಿ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಎಸ್.ಗೀತಾಬಾಯಿ ತಿಳಿಸಿದ್ದಾರೆ.