ಆರೆಸ್ಸೆಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ : ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್, ನಲಪಾಡ್‌ಗೆ ಕೋರ್ಟ್ ನೋಟಿಸ್
Update: 2026-01-06 19:40 IST
ಬೆಂಗಳೂರು : ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರೆಸ್ಸೆಸ್) ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವರಾದ ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್ ಹಾಗೂ ಕಾಂಗ್ರೆಸ್ ನಾಯಕ ಮುಹಮ್ಮದ್ ನಲಪಾಡ್‌ಗೆ ಬೆಂಗಳೂರು ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.
ಆರೆಸ್ಸೆಸ್ ಸದಸ್ಯರೂ ಆದ ಬೆಂಗಳೂರಿನ ಎ.ತೇಜಸ್ ಎಂಬವರು ದಾಖಲಿಸಿರುವ ಖಾಸಗಿ ದೂರನ್ನು ಶನಿವಾರ ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಎಸಿಜೆಎಂ) ಕೆ.ಎನ್.ಶಿವಕುಮಾರ್ ಅವರು ಮೂವರೂ ಕಾಂಗ್ರೆಸ್ ನಾಯಕರಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಜನವರಿ 14ಕ್ಕೆ ಮುಂದೂಡಿದರು.
ಖಾಸಗಿ ದೂರಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಮೊದಲ ಆರೋಪಿ, ಸಚಿವ ದಿನೇಶ್ ಗುಂಡೂರಾವ್ ಅವರನ್ನು ಎರಡನೇ ಆರೋಪಿ ಹಾಗೂ ಕಾಂಗ್ರೆಸ್ ಮುಖಂಡ ಮುಹಮ್ಮದ್ ನಲಪಾಡ್ ಅವರನ್ನು ಮೂರನೇ ಆರೋಪಿಯನ್ನಾಗಿಸಲಾಗಿದೆ.