×
Ad

ಮಕ್ಕಳಿಗೆ ನೀರು ಕುಡಿಯುವಂತೆ ಜ್ಞಾಪಿಸಲು ಶಾಲೆಗಳಲ್ಲಿ ‘ನೀರಿನ ಗಂಟೆ’

Update: 2026-01-16 21:25 IST

ಬೆಂಗಳೂರು : ರಾಜ್ಯದ ಎಲ್ಲ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಮಕ್ಕಳಿಗೆ ನೀರು ಕುಡಿಯುವಂತೆ ಜ್ಞಾಪಿಸಲು ‘ನೀರಿನ ಗಂಟೆ’ಯನ್ನು ಬಾರಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಶಾಲೆಗಳಲ್ಲಿ ಮಕ್ಕಳಿಗೆ ನೀರು ಕುಡಿಯಬೇಕೆಂಬ ಅರಿವು ಅಷ್ಟಾಗಿ ಇರುವುದಿಲ್ಲ. ಮಕ್ಕಳ ಬೆಳವಣಿಗೆಗೆ ಮತ್ತು ಆರೋಗ್ಯಕ್ಕೆ ನೀರು ಅತ್ಯವಶ್ಯಕವಾಗಿರುತ್ತದೆ. ಜೊತೆಗೆ ದೇಹದ ಉಷ್ಣತೆಯನ್ನು ನಿಯಂತ್ರಿಸುವುದರ ಜೊತೆಗೆ ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಹೀಗಾಗಿ ರಾಜ್ಯದಲ್ಲಿರುವ ಎಲ್.ಕೆ.ಜಿ, ಯು.ಕೆ.ಜಿ ಒಳಗೊಂಡಂತೆ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳಿಗೆ ಆಗಾಗ ನೀರು ಕುಡಿಯುವಂತೆ ಜ್ಞಾಪಿಸಲು ‘ನೀರಿನ ಗಂಟೆ’ ನಿಯಮವನ್ನು ಅನುಷ್ಠಾನಗೊಳಿಸಬೇಕು ಎಂದು ಸೂಚನೆ ನೀಡಿದೆ.

2022ರಲ್ಲೇ ನಿಯಮ ಜಾರಿಗೆ ಬಂದಿದ್ದರೂ ಸರಿಯಾಗಿ ಪಾಲನೆಯಾಗದ ಹಿನ್ನೆಲೆ ವಾಟರ್‌ ಬೆಲ್ ನಿಯಮ ಜಾರಿಗೆ ಕ್ರಮ ಕೈಗೊಳ್ಳುವಂತೆ ಶಾಲಾ ಶಿಕ್ಷಣ ಇಲಾಖೆಗೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷರು ಪತ್ರ ಬರೆದಿದ್ದರು. ಈ ಹಿನ್ನೆಲೆ ಶಾಲೆಗಳ ಮಕ್ಕಳಿಗೆ ‘ನೀರಿನ ಗಂಟೆ’ ನಿಯಮ ಜಾರಿ ಗೊಳಿಸುವಂತೆ ಮತ್ತೊಮ್ಮೆ ಸೂಚನೆ ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News