×
Ad

ಲೋಕಾಯುಕ್ತ ದಾಳಿ | ಅಬಕಾರಿ ಉಪ ಆಯುಕ್ತ ಜಗದೀಶ್ ನಾಯ್ಕ್, ಅಧೀಕ್ಷಕ ತಮ್ಮಣ್ಣ ಕೆ.ಎಂ. ಅಮಾನತು

Update: 2026-01-20 21:21 IST

ಬೆಂಗಳೂರು : ಲೋಕಾಯುಕ್ತ ದಾಳಿಯ ವೇಳೆ ಸಿಕ್ಕಿ ಬಿದ್ದ ಅಬಕಾರಿ ಉಪ ಆಯುಕ್ತ ಜಗದೀಶ್ ನಾಯ್ಕ್ ಮತ್ತು ಅಬಕಾರಿ ಅಧೀಕ್ಷಕ ತಮ್ಮಣ್ಣ ಕೆ.ಎಂ. ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕರ್ತವ್ಯದಿಂದ ಅಮಾನತು ಮಾಡಿ ರಾಜ್ಯ ಆರ್ಥಿಕ ಇಲಾಖೆ (ಅಬಕಾರಿ) ಸರಕಾರದ ಅಧೀನ ಕಾರ್ಯದರ್ಶಿ ಭೀಮಪ್ಪ ಪ. ಅಜೂರ್ ಅವರು ಆದೇಶ ಹೊರಡಿಸಿದ್ದಾರೆ.

ಜ.17ರಂದು ಬೆಂಗಳೂರು ನಗರದ ಬ್ಯಾಟರಾಯಪುರ ಅಬಕಾರಿ ಭವನದಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಮೇಲ್ಕಂಡ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದಿದ್ದರು. ಆ ಹಿನ್ನೆಲೆಯಲ್ಲಿ ಲಂಚದ ಹಣವನ್ನು ವಶಪಡಿಸಿಕೊಂಡಿದ್ದು, ಬಂಧಿಸಲಾಗಿತ್ತು. ವಿಚಾರಣೆಯನ್ನು ಕಾಯ್ದಿರಿಸಿ ಸೇವೆಯಿಂದ ಅಮಾನತ್ತು ಮಾಡಲಾಗಿದೆ ಎಂದು ತಿಳಿಸಲಾಗಿದೆ.

ಅಮಾನತ್ತಿನ ಅವಧಿಯಲ್ಲಿ ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಗಳ ಅನ್ವಯ ಜೀವನಾಧಾರ ಭತ್ಯೆ ನೀಡತಕ್ಕದ್ದು. ಅಲ್ಲದೆ, ಮೇಲ್ಕಂಡ ಅಧಿಕಾರಿಗಳು ಅಮಾನತ್ತು ಅವಧಿಯಲ್ಲಿ ಸಕ್ಷಮ ಪ್ರಾಧಿಕಾರಿಯವರ ಪೂರ್ವಾನುಮತಿ ಪಡೆಯದೆ ಕೇಂದ್ರ ಸ್ಥಾನವನ್ನು ಬಿಡತಕ್ಕದ್ದಲ್ಲ ಎಂದು ಭೀಮಪ್ಪ ಅಜೂರ್ ಅವರು ತಮ್ಮ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News