×
Ad

ಸರಕಾರಿ ಕಾರ್ಯಕ್ರಮಗಳಲ್ಲಿ ನಂದಿನಿ ತಿನಿಸುಗಳ ಬಳಕೆಗೆ ಸಿಎಂ ನಿರ್ದೇಶನ

Update: 2026-01-31 18:38 IST

ಸಾಂದರ್ಭಿಕ ಚಿತ್ರ | PC : KMF

ಬೆಂಗಳೂರು : ರಾಜ್ಯಾದ್ಯಂತ ಸರಕಾರಿ ಕಚೇರಿಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‍ಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಸುವಂತೆ ಹಾಗೂ ರಾಜ್ಯ ಸರಕಾರದ ಎಲ್ಲ ಕಾರ್ಯಕ್ರಮಗಳು, ಕಚೇರಿಗಳ ಸಭೆಗಳಲ್ಲಿ ಕೆಎಂಎಫ್‍ನ ‘ನಂದಿನಿ’ ತಿನಿಸುಗಳನ್ನು ಬಳಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ.

ಶನಿವಾರ ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರಕಾರದ ಕಾರ್ಯದರ್ಶಿ ಮೂಲಕ ಸರಕಾರದ ಎಲ್ಲ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದಶಿಗಳು, ವಿಧಾನಸಭೆ ಹಾಗೂ ಪರಿಷತ್ತಿನ ಕಾರ್ಯದರ್ಶಿಗಳು, ಕೆಪಿಎಸ್ಸಿ ಕಾರ್ಯದರ್ಶಿ, ದಿಲ್ಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರು, ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಎಲ್ಲ ವಿವಿಗಳ ಕುಲಸಚಿವರು, ಎಲ್ಲ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು, ಜಿ.ಪಂ.ಸಿಇಒಗಳು, ಇಲಾಖಾ ಮುಖ್ಯಸ್ಥರಿಗೆ ಸುತ್ತೋಲೆ ಮೂಲಕ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News