×
Ad

ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೆ ಆಗ್ರಹಿಸಿ ‘ರೈತ ಜಾಗೃತಿ ಯಾತ್ರೆʼ

Update: 2026-01-31 23:28 IST

ಬೆಂಗಳೂರು : ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗಾಗಿ ದೇಶಾದ್ಯಂತ ರೈತರಿಂದ ಸಹಿ ಸಂಗ್ರಹ ಮಾಡುವ ಮೂಲಕ ರೈತ ಜಾಗೃತಿ ಯಾತ್ರೆ ನಡೆಸಲಾಗುತ್ತದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.

ಶನಿವಾರ ನಗರದ ಪ್ರೆಸ್‍ಕ್ಲಬ್‍ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೆ ಎಂಎಸ್‍ಪಿ ಖಾತರಿ ಕಾನೂನು ಇಲ್ಲದ ಕಾರಣ ವರ್ಷಕ್ಕೆ 15ಲಕ್ಷ ಕೋಟಿ ರೂ.ನಷ್ಟ ಅನುಭವಿಸುತ್ತಿದ್ದಾರೆ. ಇದರ ಹಿನ್ನೆಲೆಯಲ್ಲಿ ಫೆ.7ರಿಂದ ರೈತ ಜಾಗೃತಿ ಯಾತ್ರೆ ಕನ್ಯಾಕುಮಾರಿಯಿಂದ ಆರಂಭವಾಗಿ ಕೇರಳ, ಪಾಂಡಿಚರಿ, ತಮಿಳುನಾಡು ಮುಖಾಂತರ ಅಲ್ಲಿನ ಮುಖ್ಯಮಂತ್ರಿಗಳನ್ನು ಭೇಟಿ ಮಾಡುತ್ತಾ ಯಾತ್ರೆ ಸಾಗಲಿದೆ ಎಂದರು.

ಈ ಮಾರ್ಗದಲ್ಲಿ ಸಿಗುವ ಹಳ್ಳಿಗಳ ರೈತರಿಂದ ಸಹಿ ಸಂಗ್ರಹ ಪಡೆದು ಮಾ.19 ರಂದು ಪ್ರಧಾನಿಗೆ ಸಲ್ಲಿಸಲಾಗುವುದು. 40 ದಿನಗಳ ನಂತರ ರೈತ ಯಾತ್ರೆ ಕಾಶ್ಮೀರಕ್ಕೆ ತಲುಪಿ, ದಿಲ್ಲಿಯ ರಾಮ್ ಲೀಲಾ ಮೈದಾನದಲ್ಲಿ ದೇಶದ ಎಲ್ಲ ರೈತರ ಬೃಹತ್ ಸಮಾವೇಶ ನಡೆಸಲಾಗುತ್ತದೆ ಎಂದು ಕುರುಬೂರು ಶಾಂತಕುಮಾರ್ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ರೈತ ಹೋರಾಟಗಾರರಾದ ಹತ್ತಳ್ಳಿ ದೇವರಾಜ್, ಗುರುದೇವ ನಾರಾಯಣ ಕುಮಾರ್, ನರಸರೆಡ್ಡಿ, ಶಿವಕುಮಾರ್, ಬೈರಾರೆಡ್ಡಿ, ನಾಗರಾಜ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News