ನೇರ ನೇಮಕಾತಿಗಳಲ್ಲಿ ಗರಿಷ್ಠ ವಯೋಮಿತಿ ಐದು ವರ್ಷ ಸಡಿಲಿಕೆ
Update: 2026-02-03 23:09 IST
ಬೆಂಗಳೂರು : ಸರಕಾರಿ ಹುದ್ದೆಗಳ ನೇರ ನೇಮಕಾತಿಗಳಲ್ಲಿ ಅಭ್ಯರ್ಥಿಗಳಿಗೆ ನಿಗಧಿಪಡಿಸಿದ ಗರಿಷ್ಠ ವಯೋಮಿತಿಯನ್ನು ಐದು ವರ್ಷಗಳ ಅವಧಿಗೆ ಸಡಿಲಿಕೆ ಮಾಡಿ ರಾಜ್ಯ ಸರಕಾರವು ಆದೇಶವನ್ನು ಹೊರಡಿಸಿದೆ.
2027ರ ಡಿ.31ರ ವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳ ಅನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಟ ವಯೋಮಿತಿಯಲ್ಲಿ ಐದು ವರ್ಷಗಳ ಸಡಲಿಕೆಯನ್ನು ನೀಡಿ ಆದೇಶಿಸಲಾಗಿದೆ.
ಈ ಹಿಂದೆ ಸರಕಾರಿ ಹುದ್ದೆಗಳ ನೇರ ನೇಮಕಾತಿಗಳಲ್ಲಿ ಮೂರು ವರ್ಷಗಳ ಸಡಲಿಕೆಯನ್ನು ನೀಡಿ ಆದೇಶಿಸಲಾಗಿತ್ತು. ಈ ಆದೇಶವನ್ನು ಹಿಂಪಡೆಯಲಾಗಿದ್ದು, ಉದ್ಯೋಗಾಕಾಂಕ್ಷಿಗಳು, ಜನಪ್ರತಿನಿದಿಗಳು ಮತ್ತು ಸಂಘ-ಸಂಸ್ಥೆಗಳ ಮನವಿಯಂತೆ ಗರಿಷ್ಟ ವಯೋಮಿತಿಯಲ್ಲಿ ಐದು ವರ್ಷಗಳ ವರೆಗೆ ವಿಸ್ತರಣೆ ಮಾಡಲಾಗಿದೆ.