ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾಗಿ ಡಿ.ಟಿ.ಶ್ರೀನಿವಾಸ್ ನೇಮಕ
Update: 2026-05-09 00:08 IST
ಬೆಂಗಳೂರು, ಮೇ 8: ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷರಾಗಿ ಡಿ.ಟಿ.ಶ್ರೀನಿವಾಸ್ ಅವರನ್ನು ನೇಮಕ ಮಾಡುವಂತೆ ಸಲ್ಲಿಸಲಾಗಿದ್ದ ಪ್ರಸ್ತಾವವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದನೆ ಮಾಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಕೆ.ಸಿ. ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.