ಹುದ್ದೆಗಳ ಭರ್ತಿಗೆ ಹೊರಡಿಸಿದ್ದ ಅಧಿಸೂಚನೆ ರದ್ದು
Update: 2026-05-15 00:25 IST
ಬೆಂಗಳೂರು, ಮೇ 14 : 2026ರ ಎ.16ರಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಖಾಲಿಯಿರುವ 19 ಗ್ರೂಪ್-ಬಿ ವೃಂದದ ಶಾಖಾಧಿಕಾರಿ ಹುದ್ದೆಗಳ ಭರ್ತಿಗೆ ಹೊರಡಿಸಿದ್ದ ಅಧಿಸೂಚನೆಯನ್ನು ಹಿಂಪಡೆಯಲಾಗಿದ್ದು, ಸರಕಾರದ ಆದೇಶದಂತೆ ಒಳ ಮೀಸಲಾತಿ ಅಳವಡಿಸಿಕೊಂಡು ಪರಿಷ್ಕೃತ ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತಿಳಿಸಿದೆ.
ಈ ಸಂಬಂಧ ಪ್ರಾಧಿಕಾರವು ಪ್ರಕಟಣೆ ಹೊರಡಿಸಿದ್ದು, ಎ.16ರಂದು ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ-ಕರ್ನಾಟಕ ವೃಂದದಲ್ಲಿ ಖಾಲಿಯಿರುವ ಒಟ್ಟಾರೆ 19 ಗ್ರೂಪ್-ಬಿ ವೃಂದದ ಶಾಖಾಧಿಕಾರಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಆದರೆ ಸರಕಾರ ಈಗ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿಗೆ ಒಳ ಮೀಸಲಾತಿಯನ್ನು ಅಳವಡಿಸಿ ಅಧಿಸೂಚನೆಯನ್ನು ಹೊರಡಿಸಲು ಸೂಚಿಸಿದೆ ಎಂದು ಹೇಳಿದೆ.