ನಾಳೆ ಎಂಬಿಎ, ಎಂಸಿಎ ಪ್ರವೇಶ ಪರೀಕ್ಷೆ
Update: 2026-06-13 21:11 IST
ಬೆಂಗಳೂರು, ಜೂ. 13: ಎಂಬಿಎ ಮತ್ತು ಎಂಸಿಎ ಕೋರ್ಸ್ ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜೂನ್ 14ರಂದು ಪ್ರವೇಶ ಪರೀಕ್ಷೆ ನಡೆಸುತ್ತಿದ್ದು, ಬಿಗಿ ಕ್ರಮಗಳನ್ನು ಕೈಗೊಂಡಿದೆ.
ಬೆಂಗಳೂರು, ದಾವಣಗೆರೆ, ಧಾರವಾಡ, ಕಲ್ಬುರ್ಗಿ ಮತ್ತು ಮೈಸೂರು ನಗರಗಳಲ್ಲಿ ಪರೀಕ್ಷೆ ನಡೆಯಲಿದೆ. ಎಂಬಿಎ ಪರೀಕ್ಷೆಯನ್ನು 30,542 ಹಾಗೂ ಎಂಸಿಎ ಪರೀಕ್ಷೆಯನ್ನು 22,262 ಮಂದಿ ಬರೆಯಲಿದ್ದಾರೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.
ಪರೀಕ್ಷಾ ಅಕ್ರಮಗಳಿಗೆ ಅವಕಾಶ ಇಲ್ಲದಂತೆ ತೀವ್ರ ನಿಗಾ ವ್ಯವಸ್ಥೆಯನ್ನು ಅಳವಡಿಸಿಕೊಂಡಿದ್ದು ಕಟ್ಟೆಚ್ಚರ ವಹಿಸಲು ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ. ಬೆಳಗ್ಗೆ ಎಂಬಿಎ ಮತ್ತು ಮಧ್ಯಾಹ್ನ ಎಂಸಿಎ ಪ್ರವೇಶ ಪರೀಕ್ಷೆ ನಡೆಯಲಿದೆ ಎಂದು ಅವರು ವಿವರಿಸಿದ್ದಾರೆ.