×
Ad

ಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್

ಸಚಿವರಾದ ಯತೀಂದ್ರ, ಸತೀಶ್ ಜಾರಕಿಹೊಳಿಯೂ ಭೇಟಿಯಾಗಿ ಚರ್ಚೆ

Update: 2026-06-14 20:50 IST

ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.

ರವಿವಾರ ಇಲ್ಲಿನ ಕುಮಾರಕೃಪಾ ಸರಕಾರಿ ಅತಿಥಿ ಗೃಹದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಬಿ.ಕೆ.ಹರಿಪ್ರಸಾದ್ ಅವರು ಭೇಟಿ ಮಾಡಿ ಪಕ್ಷದಲ್ಲಿನ ಪ್ರಸಕ್ತ ಬೆಳವಣಿಗೆಗಳು, ಜೂ.18ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದಿಂದ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಮಧ್ಯೆ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು, ಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿದ್ದು ಸರಕಾರದ ಕಾರ್ಯವೈಖರಿ, ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ಗೊತ್ತಾಗಿದೆ.

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News