ಮೈಸೂರು ನಗರ ಅಭಿವೃದ್ಧಿಗೆ ಸಮಗ್ರ ಯೋಜನಾ ನಕ್ಷೆ ಸಿದ್ಧ : ಡಾ.ಯತೀಂದ್ರ ಸಿದ್ದರಾಮಯ್ಯ

Update: 2026-07-24 20:18 IST

ಬೆಂಗಳೂರು, ಜು. 24: ಮೈಸೂರು ನಗರವನ್ನು ಮುಂದಿನ ಪೀಳಿಗೆಗೆ ಸೂಕ್ತವಾದ ಸಮೃದ್ಧ, ಸ್ವಾವಲಂಬಿ, ಆಧುನಿಕ, ಸುಸ್ಥಿರ ಹಾಗೂ ಸುಸಜ್ಜಿತ ವಿಶ್ವಮಟ್ಟದ ನಗರವನ್ನಾಗಿ ನಿರ್ಮಿಸುವ ಮಹತ್ವಾಕಾಂಕ್ಷಿ ಉದ್ದೇಶದೊಂದಿಗೆ ಸಮಗ್ರ ಯೋಜನಾ ನಕ್ಷೆಯನ್ನು ಸಿದ್ಧಪಡಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

ಶುಕ್ರವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಈ ಬೃಹತ್ ಯೋಜನೆಗಳ ಅನುಷ್ಠಾನ ಹಾಗೂ ಪ್ರಗತಿಯ ಕುರಿತು ನಡೆಸಿದ ಸಭೆಯಲ್ಲಿ ಅವರು, ಈ ಯೋಜನೆಯನ್ನು ಮುಂಚೂಣಿಗೆ ತರಲು ಉದ್ಯಮ, ನಿಪುಣ, ಸುಖವಾಸಿ, ಪ್ರವಾಸೋದ್ಯಮ ಮತ್ತು ಸಂಚಾರ ಮೈಸೂರು ಎಂಬ ಐದು ಪ್ರಮುಖ ಕ್ಷೇತ್ರಗಳ ಮೇಲೆ ಗಮನಹರಿಸಿ ಕಾರ್ಯರೂಪಕ್ಕೆ ತರುವ ಬಗ್ಗೆ ಚರ್ಚೆ ನಡೆಸಿದರು.

ಸಭೆಯಲ್ಲಿ ರಾಜ್ಯ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಬಿ.ಬಿ.ಕಾವೇರಿ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News