ನಿಗದಿತ ಸ್ಥಳದಲ್ಲಿ, ಕಾನೂನು ಚೌಕಟ್ಟಿನಲ್ಲಿ ಪ್ರತಿಭಟನೆ ನಡೆಸಲು ಸೂಚನೆ

Update: 2026-07-24 20:21 IST

ಬೆಂಗಳೂರು : ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಪ್ರತಿಭಟನೆ ಮಾಡುವವರು ನಿಗದಿತ ಸ್ಥಳದಲ್ಲಿ, ಕಾನೂನು ಚೌಕಟ್ಟಿನಲ್ಲಿ ಪ್ರತಿಭಟನೆಯನ್ನು ಮಾಡಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಹೇಳಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಭಟನಾಕಾರರು ಕಾನೂನು, ಸುವ್ಯವಸ್ಥೆಯನ್ನು ಕೈಗೆ ತೆಗೆದುಕೊಳ್ಳಬಾರದು. ಹಾಗೆಯೇ ಪ್ರತಿಭಟನೆಯ ವೇಳೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಎಚ್ಚರ ವಹಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಹಾಗೂ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News