ಗ್ರಂಥಪಾಲಕ ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಪ್ರಕಟ

Update: 2026-07-24 23:24 IST

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಗ್ರಂಥಪಾಲಕ-10 (ಆರ್‍ಪಿಸಿ) ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಮತ್ತು ವರ್ಗವಾರು ಕಟ್ ಆಫ್ ಅಂಕಗಳನ್ನು ಜು.23 ರಂದು ಆಯೋಗದ ಅಧಿಕೃತ ವೆಬ್‍ಸೈಟ್‍ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಿದೆ.

ಅಭ್ಯರ್ಥಿಗಳು ತಮ್ಮ ಆಯ್ಕೆಯ ಸ್ಥಿತಿ ಹಾಗೂ ಕಟ್ ಆಫ್ ಅಂಕಗಳ ಬಗ್ಗೆ ಆಯೋಗದ ಅಧಿಕೃತ ವೆಬ್‍ಸೈಟ್ http://kpsc.kar.nic.in/List  ಗೆ ಭೇಟಿ ನೀಡಿ ಮಾಹಿತಿಯನ್ನು ಪಡೆಯಬಹುದು ಹಾಗೂ ಆಯ್ಕೆಯಾದ ಅಭ್ಯರ್ಥಿಗಳಿಗೆ ಮುಂದಿನ ನೇಮಕಾತಿ ನಿಯಮಾವಳಿಗಳಂತೆ ಇಲಾಖೆಯಿಂದ ಪ್ರತ್ಯೇಕ ಮಾಹಿತಿ ನೀಡಲಾಗುವುದು ಎಂದು ಲೋಕಸೇವಾ ಆಯೋಗದ ಕಾರ್ಯದರ್ಶಿ ಕೆ.ಜ್ಯೋತಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News