ಇಮ್ಕಾಂಗ್ಲಾ ಜಮೀರ್ ಹಾಗೂ ಗುಂಜನ್ ಕೃಷ್ಣ ಕೇಂದ್ರ ಸೇವೆಗೆ ವರ್ಗಾವಣೆ

Update: 2026-07-29 01:21 IST

ಬೆಂಗಳೂರು  ಕರ್ನಾಟಕ ಕೇಡರ್‍ನ 2002ನೆ ಬ್ಯಾಚ್‍ನ ಐಎಎಸ್ ಅಧಿಕಾರಿ ಇಮ್ಕಾಂಗ್ಲಾ ಜಮೀರ್ ಎಂ. ಅವರನ್ನು ಜು.28ರಂದು ರಾಜ್ಯ ಸೇವೆಯಿಂದ ಬಿಡುಗಡೆ ಮಾಡಲಾಗಿದ್ದು, ಭಾರತ ಸರಕಾರದ ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಇಮ್ಕಾಂಗ್ಲಾ ಜಮೀರ್ ಅವರು ಪ್ರಸಕ್ತ ಹೊಸದಿಲ್ಲಿಯ ಕರ್ನಾಟಕ ಭವನದಲ್ಲಿ ಸಮನ್ವಯ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಹೊಸ ನೇಮಕಾತಿಯೊಂದಿಗೆ ಕೇಂದ್ರ ಸರಕಾರದಲ್ಲಿ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಲಿದ್ದಾರೆ ಎಂದು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.

ಗುಂಜನ್ ಕೃಷ್ಣ: ಕರ್ನಾಟಕ ಕೇಡರ್‍ನ 2004ನೆ ಬ್ಯಾಚ್‍ನ ಐಎಎಸ್ ಅಧಿಕಾರಿ ಗುಂಜನ್ ಕೃಷ್ಣ ಅವರನ್ನು ಭಾರತ ಸರಕಾರದ ಮೀನುಗಾರಿಕೆ ಇಲಾಖೆಯ ಜಂಟಿ ಕಾರ್ಯದರ್ಶಿ ಯಾಗಿ ನೇಮಕ ಮಾಡಲಾಗಿದೆ. ಕೇಂದ್ರ ಸಚಿವ ಸಂಪುಟದ ನೇಮಕಾತಿ ಸಮಿತಿಯ ಕಾರ್ಯಾಲಯವು ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ಮೂಲಕ ಜು.24, 2026ರಂದು ಹೊರಡಿಸಿದ ಆದೇಶದ ಅನ್ವಯ ಈ ನೇಮಕಾತಿ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಉಭಯ ಅಧಿಕಾರಿಗಳು ಹುದ್ದೆಯ ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಐದು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ, ಇವೆರಡರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಈ ನೇಮಕಾತಿ ಜಾರಿಯಲ್ಲಿರಲಿದೆ ಎಂದು ರಾಜ್ಯ ಸರಕಾರದ ಅಧಿಸೂಚನೆ ತಿಳಿಸಿದೆ.

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News