ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Update: 2026-07-30 01:20 IST

ಬೆಂಗಳೂರು : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿ ಮತ್ತು ವಿವಿಧ ಪ್ರೋತ್ಸಾಹಧನ ನೀಡುವ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಆ.31ರ ವರೆಗೆ ವಿಸ್ತರಿಸಿದೆ.

2025-26 ನೇ ಸಾಲಿನ ಕ್ರೀಡಾ ವಿದ್ಯಾರ್ಥಿ ವೇತನ ಹಾಗೂ 2026-27ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಕೆಗೆ ಈ ಹಿಂದೆ ಜು.31 ಕೊನೆಯ ದಿನವಾಗಿತ್ತು. ಈಗ ಅವಧಿಯನ್ನು ಆ.31ರ ವರೆಗೆ ವಿಸ್ತರಿಸಲಾಗಿದೆ. ಅರ್ಹ ಕ್ರೀಡಾಪಟುಗಳು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಎಂ.ಎನ್.ಅನುಚೇತ್ ಪ್ರಕಟನೆ ಹೊರಡಿಸಿದ್ದಾರೆ.

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News