ಕನ್ನಡ ಪುಸ್ತಕ ಪ್ರಾಧಿಕಾರದಿಂದ ನಾಲ್ಕು ಹೊಸ ಪ್ರಶಸ್ತಿಗಳ ಘೋಷಣೆ : ಡಾ.ಮಾನಸ

Update: 2026-08-04 20:08 IST
ಸಾಂದರ್ಭಿಕ ಚಿತ್ರ


ಬೆಂಗಳೂರು : ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರಸಕ್ತ ವರ್ಷದಿಂದ ಜಾರಿಗೆ ಬರುವಂತೆ ನಾಲ್ಕು ಹೊಸ ಪ್ರಶಸ್ತಿಗಳನ್ನು ಸ್ಥಾಪಿಸಿ, ಘೊಷಿಸಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಮಾನಸ ತಿಳಿಸಿದ್ದಾರೆ.

ಮಂಗಳವಾರ ಈ ಕುರಿತು ಪ್ರಕಟನೆ ನೀಡಿರುವ ಅವರು, ಪುಸ್ತಕ ಪ್ರಾಧಿಕಾರ ಅನುಷ್ಠಾನಗೊಳಿಸಿ ಜಾರಿಗೊಳಿಸುತ್ತಿರುವ ಮನೆಗೊಂದು ಗ್ರಂಥಾಲಯ ಕಾರ್ಯಕ್ರಮದಡಿಯಲ್ಲಿ ವಿಶಿಷ್ಟ ಹಾಗೂ ಉತ್ತಮ ಗ್ರಂಥಾಲಯಗಳನ್ನು ಅನುಷ್ಠಾನಗೊಳಿಸಿದವರಿಗೆ ಕನ್ನಡದ ಶ್ರೇಷ್ಠ ಬರಹಗಾರರ ಹೆಸರಿನಲ್ಲಿ ಸ್ಥಾಪಿಸಲಾದ ಪ್ರಶಸ್ತಿಗಳನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಡಾ.ಪಿ.ಆರ್.ತಿಪ್ಪೇಸ್ವಾಮಿ ಪ್ರಶಸ್ತಿಗೆ ಆಶಿಕ್ ಶಂಕರಘಟ್ಟ, ನಂಜನಗೂಡು ತಿರುಮಲಾಂಬ ಪ್ರಶಸ್ತಿಗೆ ಡಾ.ಬೆಟ್ಟಸ್ವಾಮಿ ಎಚ್.ಬಿ., ಗಳಗನಾಥ ಪ್ರಶಸ್ತಿಗೆ ಶೆಟ್ಟಿ ಚಿನ್ನದೊಡ್ಡಪ್ಪ ವಿಭೂತಿ, ಡಾ. ಹಾ.ಮಾ.ನಾಯಕ ಪ್ರಶಸ್ತಿಗೆ ಡಾ.ಶೈಲಜಾ ಎನ್. ಬಾಗೇವಾಡಿ ಅವರು ಆಯ್ಕೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.

2025ನೇ ಸಾಲಿನಲ್ಲಿ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ನಾಲ್ಕು ಮಂದಿಯನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದ್ದು, ಪ್ರಶಸ್ತಿಯು ತಲಾ 25 ಸಾವಿರ ರೂ. ನಗದು ಒಳಗೊಂಡಿದೆ. ಪ್ರಶಸ್ತಿಗಳನ್ನು ಕನ್ನಡ ಪುಸ್ತಕ ಪ್ರಾಧಿಕಾರದ ವಾರ್ಷಿಕ ಪ್ರಶಸ್ತಿಗಳ ಜೊತೆಯಲ್ಲಿ ಪ್ರದಾನ ಮಾಡಲಾಗುತ್ತದೆ. ಪ್ರÀಸ್ತಿ ಪ್ರದಾನ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುತ್ತದೆ ಎಂದು ತಿಳಿಸಿದರು.


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News